Monday, December 23, 2024

Karnataka Rains: ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ

ಬೆಂಗಳೂರು : ರಾಜ್ಯದ ದಕ್ಷಿಣ ಒಳನಾಡಿನ 5 ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 ಈ 5 ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ

ಚಾಮರಾಜನಗರ,ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉತ್ತರ ಒಳನಾಡು, ಕರಾವಳಿಯಲ್ಲಿ    ಸಾಧಾಹರಣ ಮಳೆ ಮುಂದುವರೆಯಲಿದೆ.

ಬೆಂಗಳೂರಿನಲ್ಲಿ ಎಚ್​ಎಎಲ್​ನಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಕಲಬುರಗಿಯಲ್ಲಿ 40.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

 

RELATED ARTICLES

Related Articles

TRENDING ARTICLES