Thursday, December 26, 2024

ಯುಪಿಎಸ್‌ಸಿ ಅಧ್ಯಕ್ಷರಾಗಿ ಮನೋಜ್ ಸೋನಿ ಪ್ರಮಾಣವಚನ ಸ್ವೀಕಾರ

ನವದೆಹಲಿ: ಯುಪಿಎಸ್‌ಸಿ ಅಧ್ಯಕ್ಷರಾಗಿ ಡಾ.ಮನೋಜ್ ಸೋನಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

2017ರ ಜೂನ್ 28ರಂದು ಆಯೋಗಕ್ಕೆ ಸದಸ್ಯರ ನೇಮಕಗೊಂಡಿರುವ ಸೋನಿ ಅವರು 2022ರ ಏಪ್ರಿಲ್ 5ರಿಂದ ಆಯೋಗದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇಂದು ಪೂರ್ಣವಧಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ಚೀಕರಿಸಲಿದ್ದಾರೆ.

ಹೌದು, ಆಯೋಗದ ಹಿರಿಯ ಸದಸ್ಯೆ ಸ್ಮಿತಾ ನಾಗರಾಜ್‌ ಅವರು ಮನೋಜ್ ಸೋನಿ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು ಎಂದು ಸಿಬ್ಬಂದಿ ಸಚಿವಾಲಯದ ಹೇಳಿಕೆ ತಿಳಿಸಿದೆ.

ಮನೋಜ್ ಸೋನಿ ಅವರು ಯುಪಿಎಸ್‌ಸಿ ಅಧ್ಯಕ್ಷರಾಗಿ ನೇಮಕವಾಗುವ ಮುನ್ನ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಮೂರು ಅವಧಿಗೆ ಕುಲಪತಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಗುಜರಾತ್‌ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಮುಕ್ತ ವಿಶ್ವವಿದ್ಯಾಲಯಕ್ಕೆ ಎರಡು ಅವಧಿಯವರೆಗೆ ಹಾಗೂ ಬರೋಡಾ ಮಹಾರಾಜ ಸಯ್ಯಾಜಿರಾವ್ ವಿಶ್ವವಿದ್ಯಾಲಯದ ಕುಲಪತಿಗಳಾಗಿ ಒಂದು ಅವಧಿಗೆ ಸೋನಿ ಅವರು ಸೇವೆ ಸಲ್ಲಿಸಿದ್ದಾರೆ.

 

RELATED ARTICLES

Related Articles

TRENDING ARTICLES