Monday, December 23, 2024

ಕೆಲ ‘ಲೋಫರ್ ನನ್ ಮಕ್ಕಳು’ ಈ ಪಾಪದ ಕೆಲಸ ಮಾಡಿದ್ದಾರೆ : ಸೋಮಣ್ಣ ಕಿಡಿ

ಬೆಂಗಳೂರು : ಕೆಲ ಲೋಫರ್ ನನ್ ಮಕ್ಕಳು ಈ ಪಾಪದ ಕೆಲಸ ಮಾಡಿದ್ದಾರೆ ಎಂದು ಮಾಜಿ ಸಚಿವ ವಿ. ಸೋಮಣ್ಣ ಕಿಡಿಕಾರಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡ ಬಳಿಕ ಚಾಮರಾಜನಗರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಕೃತಜ್ಞತಾ ಸಭೆಯಲ್ಲಿ ಭಾಹವಹಿಸಿದರು. ಈ ವೇಳೆ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರ ವಿರುದ್ಧ ವಿ.ಸೋಮಣ್ಣ ಹಿಗ್ಗಾಮಗ್ಗಾ ಜಾಡಿಸಿದ್ದಾರೆ.

7-8 ಮಂದಿಯಿಂದ ಈ ಸೋಲುಂಟಾಯಿತು. ನನ್ನ ಸಮಾಜದವರೇ ನನಗೇ ಕೈ ಕೊಟ್ಟರು. ಯಾರ್ಯಾರೋ  ಬೋರ್ಡ್ ಅಧ್ಯಕ್ಷರು ಮಠಗಳಿಗೆ ದುಡ್ಡು ಕೊಟ್ಟು ಜನರ ದಿಕ್ಕು ತಪ್ಪಿಸಿದರು ಎಂದು ಬಿಜೆಪಿ ಮುಖಂಡರ ವಿರುದ್ಧ ಆರೋಪ ಮಾಡಿದ್ದಾರೆ.

ಚಪ್ಪಲಿಯಲ್ಲಿ ಹೊಡೀರಿ

ಭಾಷಣದ ವೇಳೆ ತಮ್ಮ ಸೋಲಿಗೆ ಪಕ್ಷದ ಕೆಲ ಮುಖಂಡರೇ ಕಾರಣ ಎಂದು ಆರೋಪಿಸಿದ ಸೋಮಣ್ಣ, ನನಗೆ ಮಾಡಿದ ಪಾಪದ ಕೆಲಸ ಬೇರೆ ಯಾರಿಗೂ ಮಾಡುವುದು ಬೇಡ. ಪಕ್ಷಕ್ಕೆ ದ್ರೋಹ ಮಾಡಿದವರಿಗೆ ಚಪ್ಪಲಿಯಲ್ಲಿ ಹೊಡೀರಿ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ : ಕರೆಂಟ್ ಬಿಲ್ ಕಟ್ಟಲ್ಲ, ಬೇಕಾದ್ರೆ ‘ಕಾಂಗ್ರೆಸ್ ನವರನ್ನೇ ಕೇಳು’ : ಬಿಲ್ ಕಲೆಕ್ಟರ್ ಗೆ ಗ್ರಾಮಸ್ಥರ ಕ್ಲಾಸ್

ನಿಮ್ಮನ್ನು ನಂಬಿದ್ದೇ ತಪ್ಪಾಯಿತು

ಈಗ ಅವರು ಒಳೇಟು ಕೊಟ್ಟರು, ಇವರು ಒಳೇಟು ಕೊಟ್ಟರು, ಕ್ರಮ ಕೈಗೊಳ್ಳಿ ಎನ್ನುತ್ತಿದ್ದೀರಿ. ಈ ಕೆಲಸವನ್ನು 6 ತಿಂಗಳ ಹಿಂದೆ ಮಾಡಬೇಕಿತ್ತು. ಆಗ ಮಾಡಲಿಲ್ಲ, ಈಗ ಮಾಡಿ ಎನ್ನುತ್ತಿದ್ದೀರಿ. ನಾನು ನಿಮ್ಮನ್ನು ನಂಬಿಕೊಂಡಿದ್ದೆ ತಪ್ಪಾಯಿತು ಎಂದು ಹೇಳಿದ್ದಾರೆ.

ಚಿನ್ನದಂತಹ ಕ್ಷೇತ್ರ ಬಿಟ್ಟು ಬಂದೆ

ಮಾದೇಶ್ವರನಾಣೆ.. ನನ್ನ ಮಕ್ಕಳಾಣೆ ನಾನಾಗಿ ಇಲ್ಲಿಗೆ ಬರಲಿಲ್ಲ. ಹೈಕಮಾಂಡ್ ಹೇಳಿದ್ದರಿಂದ ಚಿನ್ನದಂತಹ ಗೋವಿಂದರಾಜ ನಗರ  ಕ್ಷೇತ್ರ ಬಿಟ್ಟು ಇಲ್ಲಿಗೆ ಬಂದೆ. ಪಕ್ಷ ತಾಯಿಗೆ ಸಮಾನ. ಪಕ್ಷ ದೊಳಗಿದ್ದು ದ್ರೋಹ ಬಗೆಯುವುದು ಎಷ್ಟರಮಟ್ಟಿಗೆ ಸರಿ? ಬಿಜೆಪಿ ಜಿಲ್ಲಾಧ್ಯಕ್ಷ ನಾರಾಯಣಪ್ರಸಾದ್ ಅವರಿಗೆ ನೈತಿಕತೆ ಇದ್ದರೇ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರನ್ನು ಒದ್ದು ಓಡಿಸಿ ಎಂದು ಆಗ್ರಹಿಸಿದ್ದಾರೆ.

RELATED ARTICLES

Related Articles

TRENDING ARTICLES