ಬೆಂಗಳೂರು : ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರ ಹೆಸರು ಜೋರಾಗುತ್ತಿದ್ದಂತೆ, ಸಿದ್ದುಗೆ ಶಾಸಕ ಸತೀಶ್ ಜಾರಕಿಹೊಳಿ ಪರೋಕ್ಷ ಬೆಂಬಲ ಸೂಚಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಸತೀಶ್ ಜಾರಕಿಹೊಳಿ, ಸಿದ್ದರಾಮಯ್ಯ ಅವರಿಗೆ ಆಡಳಿತ ಅನುಭವ ಇದೆ. ಕಳೆದ ಬಾರಿಯಂತೆ ಈ ಬಾರಿಯೂ ಸರಾಗವಾಗಿ ಆಡಳಿತ ನಡೆಯಲಿದೆ. ಅವರ ಕಾರ್ಯಕ್ರಮ ಕಾರ್ಯವೈಖರಿಯೇ ಮತ್ತೆ ರಿಪೀಟ್ ಆಗಲಿದೆ ಎಂದು ಹೇಳಿದ್ದಾರೆ.
ಅಂತೆಯೇ ಜನರಿಗೂ ಪಕ್ಷಕ್ಕೆ ಅನುಕೂಲ ಆಗುವ ವಿಶ್ವಾಸವಿದೆ. ಸೀಕ್ರೆಟ್ ಬ್ಯಾಲೆಟ್ ಮಾನದಂಡದ ಮೇಲೆ ಸಿದ್ದರಾಮಯ್ಯ ಆಯ್ಕೆ ನಡೆದಿದೆ. ಡಿ.ಕೆ ಶಿವಕುಮಾರ್ ಡಿಸಿಎಂ ಆಗಬಹುದೂ ಅಥವಾ ಇಲ್ಲದೇ ಇರಬಹುದು. ನಾವೆಲ್ಲ ಅಧಿಕಾರ ಇರಲಿ ಇಲ್ಲದೇ ಇರಲಿ ಪಕ್ಷಕ್ಕಾಗಿ ದುಡಿಯುತ್ತೇವೆ. ಲೋಕಸಭಾ ಚುನಾವಣೆ ಕೂಡ ಮಾಡ್ತೇವೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಇದನ್ನೂ ಓದಿ : ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಬಹುತೇಕ ಪಕ್ಕಾ
ಸಿಎಂ ಸ್ಥಾನಕ್ಕಾಗಿ ಡಿಕೆಶಿ ಪಟ್ಟು
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನಕ್ಕಾಗಿ ಬಿಗಿ ಪಟ್ಟು ಹಿಡಿದಿದ್ದಾರೆ. ಸಿದ್ದರಾಮಯ್ಯ ಬೆಂಬಲಿಗರು ಮಾಧ್ಯಮಗಳಿಗೆ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಡಿ.ಕೆ ಶಿವಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಯಾವ ಆಧಾರದಲ್ಲಿ ನಾಳೆ ಪ್ರಮಾಣ ವಚನ ಅಂತೀರಾ? ರಾಜ್ಯಪಾಲರ ಲಭ್ಯತೆ ಇದೆಯೋ ಇಲ್ವೋ ಎಂಬುದೇ ಖಚಿತತೆ ಇಲ್ಲ? ಕೆಪಿಸಿಸಿ ಅಧ್ಯಕ್ಷ ನಾನು, ನಾನು ಏನೂ ಹೇಳದೆ ಸಿದ್ಧತೆ ಹೇಗೆ ನಡೆಸಿದ್ರಿ? ಪ್ರಮಾಣ ವಚನಕ್ಕೆ ಸಿದ್ಧತೆ ನಡೆಸುವಂತೆ ನೀವು ಸೂಚನೆ ನೀಡಿದ್ರಾ?ಎಂದು ಡಿಕೆಶಿ ಫುಲ್ ಗರಂ ಆಗಿದ್ದಾರೆ.