Sunday, December 22, 2024

ಭಾಗ್ಯಗಳ ಸರದಾರನಿಗೆ ಸಿಎಂ ಪಟ್ಟ..?

ನವದೆಹಲಿ: ಸಿದ್ದು,ಡಿಕೆಶಿ ಜಟಾಪಟಿಯಲ್ಲಿ ಸಿದ್ದರಾಮಯ್ಯ ಸಿಎಂ ಚುಕ್ಕಾಣಿ ಹಿಡಿಯುವ ಸಾಧ್ಯತೆ ಇದೆ. 

ಹೌದು, ದಹಲಿಯಲ್ಲೇ ಸಿಎಂ ಕುರ್ಚಿ ಫೈಟ್ ಜೋರಾಗಿದ್ದು, ನಿನ್ನೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಭೆ ಮೇಲೆ ಸಭೆ ಮಾಡಿದರೂ ಸಿಎಂ ಆಯ್ಕೆ ಫೈನಲ್‌ ಆಗಿಲ್ಲ. ಇನ್ನೂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರನ್ನು ಕರೆಸಿಕೊಂಡು ಒನ್‌ ಟು ಒನ್‌ ಮೀಟಿಂಗ್‌ ಮಾಡಿದರೂ ಕೂಡ ಯಾರನ್ನ ಪಟ್ಟಕ್ಕೇರಿಸಬೇಕು ಎನ್ನುವುದೇ ಬಗೆಹರಿಯುತ್ತಿಲ್ಲ. ಅಂದ್ರೆ ಇದೀಗ ಆ ಎಲ್ಲಾ ಕದನಕ್ಕೆ ಇಂದು ತರೆಬಿಳಲಿದೆ.

ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್‌ (DK Shivakumar) ನಡುವಿನ ಕುರ್ಚಿ ಕದನ ಬಹುತೇಕ ಅಂತ್ಯವಾಗಿದ್ದು, ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿ (Chief Minister) ಸ್ಥಾನ ಸಿಗುವ ಸಾಧ್ಯತೆ ಹೆಚ್ಚಾಗಿದೆ.

ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ, ಡಿಕೆ ಶಿವಕುಮಾರ್‌ ಅವರಿಗೆ ಪ್ರಬಲವಾದ ಎರಡು ಖಾತೆಗಳೊಂದಿಗೆ ಡಿಸಿಎಂ ಸ್ಥಾನ ನೀಡಲು ಎಐಸಿಸಿ ಮುಂದಾಗಿದೆ. ಅಷ್ಟೇ ಅಲ್ಲದೇ ಕೆಪಿಸಿಸಿ ಅಧ್ಯಕ್ಷರಾಗಿಯೇ ಡಿಕೆ ಶಿವಕುಮಾರ್‌ ಅವರೇ ಮುಂದುವರಿಯುವ ಸಾಧ್ಯತೆಯಿದೆ.

RELATED ARTICLES

Related Articles

TRENDING ARTICLES