ನವದೆಹಲಿ : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮ್ಯಾಜಿಕ್ ನಂಬರ್ನಿಂದ ಕಾಂಗ್ರೆಸ್ ಗೆದ್ದು ಬೀಗಿದ್ದು ಸಿಎಂ ಆಯ್ಕೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ಗೆ ಭಾರೀ ತಲೆನೋವು ಆಗಿದೆ. ಕಗ್ಗಂಟಾಗಿಯೇ ಮುಂದುವರಿದ ಸಿಎಂ ಆಯ್ಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ್ ಖರ್ಗೆ ಇಂದು ಈ ಗೊಂದಲಕ್ಕೆ ತೆರೆ ಬೀಳುವ ಸಾಧ್ಯತೆ ಇದೆ.
ಹೌದು,ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಬಹುತೇಕ ಪಕ್ಕಾ ಆಗಿದೆ. ಕಾಂಗ್ರೆಸ್ ಹೈಕಮಾಂಡ್ನಿಂದ ಅಧಿಕೃತ ಘೋಷಣೆ ಬಾಕಿ ಇದ್ದು ರಾಹುಲ್ ಗಾಂಧಿ ಭೇಟಿ ಬಳಿಕ ಅಧಿಕೃತ ಘೋಷಣೆ ಸಾಧ್ಯತೆ.
ಡಿಕೆ ಶಿವಕುಮಾರ್ಗೆ ಉಪಮುಖ್ಯಮಂತ್ರಿ ಸ್ಥಾನ ಸಾಧ್ಯತೆ
ಸಿದ್ದರಾಮಯ್ಯರಿಗೆ ಸಿಎಂ ಸ್ಥಾನ, ಡಿಕೆ ಶಿವಕುಮಾರ್ಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಸಾಧ್ಯತೆ ಇದೆ. ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿಯೂ ಮುಂದುವರಿಯಲಿದ್ದಾರೆ. ಅಧ್ಯಕ್ಷ ಹುದ್ದೆ ಜೊತೆ ಎರಡು ಪ್ರಮುಖ ಖಾತೆಗಳಿಗೆ ಡಿಕೆಶಿ ಆಯ್ಕೆ ಮಾಡುವ ಸಾಧ್ಯತೆ ಇದೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ. ಇಂಧನ ಮತ್ತು ನೀರಾವರಿ ಮೇಲೆ ಡಿಕೆ ಶಿವಕುಮಾರ್ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ.