Friday, November 22, 2024

SORRY, ಜೂನ್ ತಿಂಗಳಿಂದ ನಮಗೆ ಕರೆಂಟ್ ಬಿಲ್ ಕೊಡಬೇಡಿ, ನಾವು ಬಿಲ್ ಕಟ್ಟಲ್ಲ : ಮನೆ ಮುಂಬೆ ಬೊರ್ಡ್ ಅಳವಡಿಕೆ

ಬೆಂಗಳೂರು : ‘ಕ್ಷಮಿಸಿ, ಮೆಸ್ಕಾಂನವರೇ ಜೂನ್ ತಿಂಗಳಿಂದ ನಮಗೆ ಕರೆಂಟ್ ಬಿಲ್ ಕೊಡಬೇಡಿ. ನಾವು ಬಿಲ್ ಕಟ್ಟಲ್ಲ’. ಹೀಗೆಂದು, ಉಡುಪಿಯ ಮನೆಯೊಂದರ ಮುಂದೆ ನಾಮಫಲಕ ಅಳವಡಿಕೆ ಮಾಡಲಾಗಿದೆ.

ಹೌದು, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಗೆಲುವಿನ ನಗೆ ಬೀರಿದ್ದೇ ತಡ, ಇನ್ನು ನಾವು ಕೂಡ ಕರೆಂಟ್ ಬಿಲ್ ಕಟ್ಟಲ್ಲ ಎಂದು ರಾಜ್ಯದ ಜನ ಪಟ್ಟು ಹಿಡಿದಿದ್ದಾರೆ.

ಉಡುಪಿಯ ಪೆರಂಪಳ್ಳಿ ನಿವಾಸಿ ವಾಸುದೇವ ಭಟ್ ಪೆರಂಪಳ್ಳಿ ಎಂಬುವವರು ಕರೆಂಟ್ ಬಿಲ್ ಕಟ್ಟುವುದಿಲ್ಲ ಎಂದು ಮನೆಯಲ್ಲಿ ಬೋರ್ಡ್ ಅಳವಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದರೆ ಹಲವಾರು ಉಚಿತ ಯೋಜನೆಗಳನ್ನು ನೀಡುವುದಾಗಿ ಕಾಂಗ್ರೆಸ್ ಘೋಷಣೆ ಮಾಡಿದೆ. ಜೂನ್ ತಿಂಗಳಿಂದಲೇ ಉಚಿತ ವಿದ್ಯುತ್ ಕೊಡುವ ಯೋಜನೆ ಘೋಷಣೆಯಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಕಾಂಗ್ರೆಸ್ ‘ಗ್ಯಾರಂಟಿಗೆ ಷರತ್ತು’ ವಿಧಿಸುವುದು ಸರಿಯಲ್ಲ : ಅಶ್ವತ್ಥನಾರಾಯಣ ಕಿಡಿ

ನಾನು ಕೂಡ ಒಬ್ಬ ಫಲಾನುಭವಿ

ತಾನು ಸೇರಿದಂತೆ ಯಾರೂ ವಿದ್ಯುತ್ ಬಿಲ್ ಪಾವತಿ ಮಾಡಬೇಕಾಗಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಶೇಕಡಾ 95 ಜನತೆ ಇದರ ಲಾಭ ಪಡೆಯಬಹುದು ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಡಿಕೆಶಿ ಹೇಳಿರುವ ಶೇಕಡಾ 95ರ ಒಳಗೆ ನಾನು ಕೂಡ ಬರುತ್ತೇನೆ ಎಂದು ವಾಸುದೇವ ಭಟ್ ಪೆರಂಪಳ್ಳಿ ತಿಳಿಸಿದ್ದಾರೆ.

ನಾನು ಕೂಡ ಒಬ್ಬ ಫಲಾನುಭವಿ ಎಂಬುದು ದೃಢ ಆಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದೆ. ನಾನು ವಿದ್ಯುತ್ ಬಿಲ್ ಕಟ್ಟೋದಿಲ್ಲ. ಯಾಕಂದ್ರೆ ನಾನು ಸರ್ಕಾರಕ್ಕೆ ತೆರಿಗೆ ಕಟ್ಟುತ್ತಿರುವುದರಿಂದ ಈ ಯೋಜನೆಗೆ ಅರ್ಹ ಫಲಾನುಭವಿ ಆಗಿದ್ದೇನೆ ಎಂದು ವಾಸುದೇವ ಭಟ್ ಪೆರಂಪಳ್ಳಿ ಹೇಳಿದ್ದಾರೆ.

RELATED ARTICLES

Related Articles

TRENDING ARTICLES