Wednesday, May 22, 2024

AICC Press Meet : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಂದ ಮಹತ್ವದ ಸುದ್ದಿಗೋಷ್ಠಿ

ನವದೆಹಲಿ : ಸಿಎಂ ಸ್ಥಾನಕ್ಕೆ ಕಳೆದ ನಾಲ್ಕು ದಿನದಿಂದ ಕುರ್ಚಿ ಗುದ್ದಾಟ ನಡೆಯುತ್ತಿತ್ತು. ಆದರೆ ಅದಕ್ಕೆಲ್ಲಾ ಇಂದು ತರೆಬೀದಿದೆ. 

ಹೌದು, ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವಿನ ಕಿತ್ತಾಟವನ್ನು ನಿನ್ನೆ ತಡರಾತ್ರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಗೆಹರಿಸಿದ್ದಾರೆ. ಸರಣಿ ಸಭೆ ಮೂಲಕ ಎಲ್ಲವನ್ನೂ ಗೊಂದಲಗಳನ್ನು ನಿವಾರಿಸಿದ್ದಾರೆ.

ಇನ್ನೂ ಕಳೆದ ನಾಲ್ಕೈದು ದಿನಗಳಿಂದ ದೆಹಲಿಯಲ್ಲಿ ನಡೆದ ರಾಜಕೀಯ ಬೆಳವಣಿಗೆಗಳಿಗೆ ಫುಲ್ ಸ್ಟಾಪ್ ಬಿದ್ದಿದೆ. ಹೀಗಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಬೆಳಗ್ಗೆ 10 ಗಂಟೆ ಸುದ್ದಿಗೋಷ್ಠಿ ಕರೆದಿದ್ದಾರೆ.

ಅಧಿಕಾರ ಹಂಚಿಕೆ

ಕರ್ನಾಟಕದ ಮುಖ್ಯಮಂತ್ರಿ ಆಯ್ಕೆ ವಿಚಾರ ಬಗೆಹರಿದಿದೆ. ಅಧಿಕಾರ ಹಂಚಿಕೆ ಮಾಡಲಾಗಿದ್ದು, 5 ವರ್ಷಗಳ ಅಧಿಕಾರ ಅವಧಿಯಲ್ಲಿ ತಲಾ ಎರಡೂವರೆ ವರ್ಷಗಳ ಕಾಲ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಸಿಎಂ ಆಗಿ ಅಧಿಕಾರ ಅನುಭವಿಸಲಿದ್ದಾರೆ. ಮೊದಲನೇ ಅವಧಿಗೆ ಸಿದ್ದರಾಮಯ್ಯ ಸಿಎಂ ಹಾಗೂ ಡಿಕೆಶಿ ಡಿಸಿಎಂ ಆಗಲಿದ್ದಾರೆ. ಶನಿವಾರ (ಮೇ 20) ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಲಿದ್ದಾರೆ

ಇನ್ನು ಈ ಮಾಧ್ಯಮಗೋಷ್ಠಿಯಲ್ಲಿ ಅಧಿಕೃತವಾಗಿ ಸಿಎಲ್​ಪಿ ನಾಯಕನ ಹೆಸರು ಘೋಷಣೆ ಮಾಡಿಲಿದ್ದಾರಾ? ಅಥವಾ ಅಧಿಕಾರ ಹಂಚಿಕೆ ಬಗ್ಗೆ ಬಹಿರಂಗಪಡಿಸಲಿದ್ದಾರಾ? ಎನ್ನುವ ಕುತೂಹಲ ಮೂಡಿಸಿದೆ.

RELATED ARTICLES

Related Articles

TRENDING ARTICLES