Monday, December 23, 2024

ಸಿದ್ದು ಪ್ರಮಾಣವಚನ ಸಮಾರಂಭಕ್ಕೆ ಸ್ಟಾಲಿನ್ ಗೆ ಆಹ್ವಾನ

ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಆಯ್ಕೆಯಾಗಿದ್ದಾರೆ.

ಮೇ 20ರಂದು ಶನಿವಾರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೂ ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನ ನೀಡಲಾಗಿದೆ.

ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಿದ್ದರಾಮಯ್ಯ ದೂರವಾಣಿ ಕರೆ ಮೂಲಕ ಸ್ಟಾಲಿನ್ ಅವರನ್ನು ಆಹ್ವಾನಿಸಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳ ಹೊರತಾಗಿ ಸಮಾನ ಮನಸ್ಕ ರಾಜಕೀಯ ಪಕ್ಷಗಳ ಪ್ರಮುಖ ನಾಯಕರನ್ನು ಆಹ್ವಾನಿಸಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ತಿಳಿಸಿದ್ದಾರೆ.

ಇದನ್ನೂ ಓದಿ : ಸಿದ್ದರಾಮಯ್ಯ 2 ವರ್ಷ, ಡಿಕೆಶಿಗೆ 3 ವರ್ಷ ಸಿಎಂ ಪಟ್ಟ..?

ಮೇ 20ರಂದು ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸುತ್ತಾರೆ. ಮೇ 20ರ ಮಧ್ಯಾಹ್ನ 12.30ಕ್ಕೆ ಪದಗ್ರಹಣ ಸಮಾರಂಭ ನಡೆಯಲಿದೆ. ಮೇ 20ರಂದು ಕೆಲ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸ್ತಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್​ ಹೇಳಿದ್ದಾರೆ.

ಸಂಜೆ 7ಕ್ಕೆ ಶಾಸಕಾಂಗ ಸಭೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​​ ಅವರು ಇಂದು ಸಂಜೆ 7 ಗಂಟೆಗೆ ಶಾಸಕಾಂಗ ಸಭೆ ಕರೆದಿದ್ದಾರೆ. ವಿಧಾನಸಭೆ, ಪರಿಷತ್, ಕಾಂಗ್ರೆಸ್ ಸಂಸದರನ್ನು ಬೆಂಗಳೂರು ಕ್ವೀನ್ಸ್ ರಸ್ತೆಯ ಇಂದಿರಾ ಗಾಂಧಿ ಭವನದಲ್ಲಿ ನಡೆಯುವ ಸಭೆಗೆ ಆಹ್ವಾನಿಸಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಶಾಸಕರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಈ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರನ್ನು ಆಯ್ಕೆ ಮಾಡಲಾಗುತ್ತದೆ.

RELATED ARTICLES

Related Articles

TRENDING ARTICLES