Wednesday, January 22, 2025

‘ಸಿದ್ದು’ ಭಾರೀ ಬೆಂ’ಬಲ’ : ಪ್ರಮಾಣವಚನ ಸಮಾರಂಭಕ್ಕೆ 8 ರಾಜ್ಯಗಳ ಸಿಎಂಗಳು

ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಸಿದ್ದರಾಮಯ್ಯ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಎಂಟು ರಾಜ್ಯಗಳ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಗಿದೆ.

ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಪದಗ್ರಹಣ ಸಮಾರಂಭಕ್ಕೆ ಕಾಂಗ್ರೆಸ್ ಆಡಳಿತದಲ್ಲಿರುವ ರಾಜ್ಯದ ಸಿಎಂಗಳು ಸೇರಿದಂತೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂ’ಬಲ’ ಸೂಚಿಸಲು ಸಿದ್ದರಿರುವ ಎಂಟು ರಾಜ್ಯಗಳ ಸಿಎಂಗಳು ಆಗಮಿಸಲಿದ್ದಾರೆ. ಆ ಮೂಲಕ ಶಕ್ತಿ ಪ್ರದರ್ಶನಕ್ಕೆ ಕಾಂಗ್ರೆಸ್ ಹೈಕಮಾಂಡ್ ಸಜ್ಜಾಗಿದೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌, ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಹಿಮಾಚಲಪ್ರದೇಶದ ಮುಖ್ಯಮಂತ್ರಿ ಸುಖ್‌ವಿಂದರ್ ಸಿಂಗ್ ಸುಖು, ಪುದುಚೆರಿ ಮುಖ್ಯಮಂತ್ರಿ ರಂಗಸ್ವಾಮಿ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಪದಗ್ರಹಣ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ.

ಇದನ್ನೂ ಓದಿ : ನೂತನ ‘ಸಿಎಂ ಸಿದ್ದು’ಗೆ ಬೊಮ್ಮಾಯಿ ಅಭಿನಂದನೆ

ರಾಜ್ಯಪಾಲರಿಂದ ಆಹ್ವಾನ

ಕರ್ನಾಟಕದಲ್ಲಿ ನೂತನ ಸರ್ಕಾರ ರಚಿಸಲು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಶಾಸಕಾಂಗ ಪಕ್ಷದ ನಾಯಕ (ಸಿಎಲ್‌ಪಿ ಲೀಡರ್) ಹಾಗೂ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ, ನಿಯೋಜಿತ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಸದಸ್ಯರನ್ನು ಆಹ್ವಾನಿಸಿದ್ದಾರೆ.

ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಇದೇ ಮೇ 20ರ ಶನಿವಾರ ಮಧ್ಯಾಹ್ನ 12.30ಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ. ಆಹ್ವಾನ ಪತ್ರವನ್ನು ರಾಜ್ಯಪಾಲರು, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಿಗೆ ಕಳುಹಿಸಿದ್ದಾರೆ.

RELATED ARTICLES

Related Articles

TRENDING ARTICLES