Monday, December 23, 2024

ಸಿದ್ದು-ಡಿಕೆಶಿ ಒಟ್ಟಿಗೆ ಬೆಂಗಳೂರಿಗೆ ‘ಗ್ರ್ಯಾಂಟ್ ಎಂಟ್ರಿ’

ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ಆಯ್ಕೆಯಾಗಿರುವ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ನಿಯೋಜಿತರಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬೆಂಗಳೂರಿಗೆ ಆಗಮಿಸಿದ್ದಾರೆ.

ಸಿಎಂ ಆಯ್ಕೆ ಕಾಳಗಕ್ಕೂ ಮೊದಲು ದೆಹಲಿಗೆ ಬೇರೆ-ಬೇರೆಯಾಗಿ ಹೋಗಿದ್ದ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಬೆಂಗಳೂರಿಗೆ ಹಿಂದಿರುಗುವಾಗ ಒಟ್ಟಿಗೆ ವಿಶೇಷ ವಿಮಾನದಲ್ಲಿ ಎಚ್ಎಎಲ್(HAL) ಏರ್‌ಪೋರ್ಟ್‌ನಲ್ಲಿ ಬಂದಿಳಿದಿದ್ದಾರೆ.

ನೂತನ ಸಿಎಂ ಹಾಗೂ ಡಿಸಿಎಂ ಆಗಿರುವ ಇಬ್ಬರು ಕಾಂಗ್ರೆಸ್ ನಾಯಕರಿಗೂ ಅದ್ಧೂರಿ ಸ್ವಾಗತ ಕೋರಲಾಗಿದೆ. ಕಲಾ ತಂಡಗಳ ಪ್ರದರ್ಶನದ ಜೊತೆಗೆ ಪಟಾಕಿ ಸಿಡಿಸಿ ಕಾರ್ಯಕರ್ತರು ಕುಣಿಯುತ್ತಿದ್ದು, ಕಾಂಗ್ರೆಸ್ ಸಂಭ್ರಮವನ್ನು ಇಮ್ಮಡಿಗೊಳಿಸಿದೆ.

ಇದನ್ನೂ ಓದಿ : ಸಿದ್ದು ಪ್ರಮಾಣವಚನ ಸಮಾರಂಭಕ್ಕೆ ಸ್ಟಾಲಿನ್ ಗೆ ಆಹ್ವಾನ

ಸಿದ್ದು ಮನೆ ಮುಂದೆ ಸಂಭ್ರಮಾಚರಣೆ

ಸಿದ್ದರಾಮಯ್ಯ ಅವರು ಬೆಂಗಳೂರಿನ ತಮ್ಮ ನಿವಾಸಕ್ಕೆ ಆಗಮಿಸಿದ್ದಾರೆ. ಡಿಕೆಶಿ ತಮ್ಮ ಸದಾಶಿವನಗರದ ನಿವಾಸಕ್ಕೆ ತೆರಳಿದ್ದಾರೆ. ಈ ವೇಳೆ ಕಾರ್ಯಕರ್ತರ ಸಂಬ್ರಮ ಮುಗಿಲು ಮುಟ್ಟಿತ್ತು. ಬಳಿಕ, ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​​ ಅವರು ಶಾಸಕಾಂಗ ಸಭೆಗೆ ಆಗಮಿಸಲಿದ್ದಾರೆ. ಬೆಂಗಳೂರು ಕ್ವೀನ್ಸ್ ರಸ್ತೆಯ ಇಂದಿರಾ ಗಾಂಧಿ ಭವನದಲ್ಲಿ ಇಂದು ಸಭೆ ನಡೆಯಲಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಶಾಸಕರು ಬೆಂಗಳೂರಿಗೆ ಆಗಮಿಸಿದ್ದಾರೆ.

RELATED ARTICLES

Related Articles

TRENDING ARTICLES