Sunday, May 19, 2024

‘ಕೈ’ ಶಾಸಕಾಂಗ ಪಕ್ಷದ ನಾಯಕನಾಗಿ ‘ಸಿದ್ದ’ರಾಮಯ್ಯ ಆಯ್ಕೆ

ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಅಂತ್ಯವಾಗಿದ್ದು ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿದೆ.

ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಪಕ್ಷದ ಶಾಸಕರೆಲ್ಲರ ಸಹಮತ ಸೂಚಿಸಿದ ಹಿನ್ನೆಲೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಘೋಷಿಸಲಾಗಿದೆ.

ಎಐಸಿಸಿ ವೀಕ್ಷಕರಾದ ಸುಶೀಲ್ ಕುಮಾರ್​ ಶಿಂಧೆ, ಜಿತೇಂದ್ರ ಸಿಂಗ್, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ನೂತನವಾಗಿ ಆಯ್ಕೆಯಾದ ಕಾಂಗ್ರೆಸ್ ಶಾಸಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ರಾಜಭವನದತ್ತಕೈನಾಯಕರು

ಕೆಪಿಸಿಸಿ ಕಚೇರಿಯ ಇಂದಿರಾ ಗಾಂಧಿ ಸಭಾ ಭವನದಲ್ಲಿ 25 ನಿಮಿಷಗಳ ಕಾಲ ನಡೆದ ಸಭೆ ಇದೀಗ ಮುಕ್ತಾಯವಾಗಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ರಾಜಭವನದತ್ತ ತೆರಳಿದ್ದು, ರಾಜ್ಯಪಾಲರನ್ನು ಭೇಟಿ ಮಾಡಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.

ಇದನ್ನೂ ಓದಿ : ಸಿದ್ದು-ಡಿಕೆಶಿ ಒಟ್ಟಿಗೆ ಬೆಂಗಳೂರಿಗೆ ‘ಗ್ರ್ಯಾಂಟ್ ಎಂಟ್ರಿ’

ಸಿದ್ದು,ಡಿಕೆಶಿಗೆ ಬೊಮ್ಮಾಯಿ ವಿಶ್

ಕರ್ನಾಟಕದ ನೂತನ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಆಗಿ ಆಯ್ಕೆಯಾದ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಅವರಿಗೆ ನಿರ್ಗಮಿತ ಸಿಎಂ ಬಸವರಾಜ ಬೊಮ್ಮಾಯಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಎಲ್ಲಾ ಗ್ಯಾರಂಟಿ ಈಡೇರಿಸಲಿ

ಪ್ರಜಾಪ್ರಭುತ್ವದ ತೀರ್ಪು ಒಪ್ಪಿಕೊಳ್ಳಬೇಕಾಗುತ್ತದೆ. ರಾಜಕಾರಣದಲ್ಲಿ ಪಾತ್ರಗಳನ್ನು ತೀರ್ಮಾನಿಸುವುದು ಜನರು. ನಮಗೆ ವಿರೋಧ ಪಕ್ಷವಾಗಿ ಜನ ತೀರ್ಮಾನ ಕೊಟ್ಟಿದ್ದಾರೆ. ಕಾಂಗ್ರೆಸ್ ಗ್ಯಾರಂಟಿಗಳ ಮೇಲೆ ಜನರಿಗೆ ದೊಡ್ಡ ವಿಶ್ವಾಸ ಇದೆ. ಜನರಿಗೆ ನೀಡಿದ ಎಲ್ಲ ಉಚಿತ ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಈಡೇರಿಸಲಿ. ಯಾವ ರೀತಿ ನಿಭಾಯಿಸುತ್ತಾರೆ ಅಂತಾ ಕಾದು ನೋಡೋಣ ಎಂದು ಬೊಮ್ಮಾಯಿ ಹೇಳಿದ್ದಾರೆ.

RELATED ARTICLES

Related Articles

TRENDING ARTICLES