Saturday, December 28, 2024

ಎಐಸಿಸಿಯಿಂದ ಅಧಿಕೃತ ಘೋಷಣೆ: ಸಿದ್ದರಾಮಯ್ಯ ಸಿಎಂ, ಡಿಕೆ ಶಿವಕುಮಾರ್​​ಗೆ ಡಿಸಿಎಂ ಪಟ್ಟ

ಬೆಂಗಳೂರು: ಅಂತೂ ಇಂತೂ ಕೊನೆಗೂ ಕರ್ನಾಟಕದ ಮುಖ್ಯಮಂತ್ರಿ ಹುದ್ದೆ ಸಿದ್ದರಾಮಯ್ಯ(Siddaramaiah) ಅವರಿಗೆ ಒಲಿದಿದೆ.  ಸಿದ್ದರಾಮಯ್ಯ ಮುಖ್ಯಮಂತ್ರಿ, ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿ ಎಂದು ಕಾಂಗ್ರೆಸ್ ಹೈಕಮಾಂಡ್ ಇಂದು (ಮೇ 18) ಅಧಿಕೃತ ಘೋಷಣೆ ಮಾಡಿದೆ.

ಹೌದು, ಕಳೆದ ನಾಲ್ಕೈದು ದಿನಗಳಿಂದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ನಡುವೆ ನಡೆಯುತ್ತಿದ್ದ ಹಗ್ಗಜಗ್ಗಾಟ ಕೊನೆಯಾದಂತಾಗಿದೆ. ಇನ್ನು ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ  ಮೇ.20ರಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

 

RELATED ARTICLES

Related Articles

TRENDING ARTICLES