ನವದೆಹಲಿ: ಕರ್ನಾಟಕದ 24ನೇ ಮುಖ್ಯಮಂತ್ರಿ, 2ನೇ ಬಾರಿಗೆ ಸಿದ್ದರಾಮಯ್ಯ ಸಿಎಂ ಪಟ್ಟ ಮತ್ತು ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಒಲಿದುಬಂದಿದೆ.
ಹೌದು, ಮೇ 20 ರಂದು ಬೆಂಗಳೂರಿನಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದೆ ಎಂದು ಎಎನ್ಐ ಟ್ವೀಟ್ ಮಾಡಿದೆ. ರಾತ್ರಿ ನಡೆದ ಚರ್ಚೆ ಮತ್ತು ಸಭೆಗಳ ವೇಳೆ ಈ ನಿರ್ಣಯಕ್ಕೆ ಬರಲಾಗಿದೆ. ಈ ನಿರ್ಧಾರಕ್ಕೆ ಸರ್ವಾನುಮತವಿದೆ. ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Siddaramaiah to be next Karnataka CM, DK Shivakumar to be his deputy: Sources
Read @ANI Story | https://t.co/lZx3EknmCD#SiddaramaiahCM #DKShivakumar #KarnatakaCM pic.twitter.com/UvWZz5D3Kf
— ANI Digital (@ani_digital) May 17, 2023
ಕಳೆದ 5 ದಿನಗಳಿಂದ ನಡೆಯುತ್ತಿದ್ದ ಸಿಎಂ ಆಯ್ಕೆ ಹೈಡ್ರಾಮಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಗುರುವಾರ ಸಂಜೆ 7 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅಧಿಕೃತ ಘೋಷಣೆಯಾಗಲಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶಾಸಕಾಂಗ ಸಭೆ ಕರೆದಿದ್ದಾರೆ. ವಿಧಾನಸಭೆ, ಪರಿಷತ್, ಕಾಂಗ್ರೆಸ್ ಸಂಸದರನ್ನು ಬೆಂಗಳೂರು ಕ್ವೀನ್ಸ್ ರಸ್ತೆಯ ಇಂದಿರಾ ಗಾಂಧಿ ಭವನದಲ್ಲಿ ನಡೆಯುವ ಸಭೆಗೆ ಡಿಕೆಶಿ ಆಹ್ವಾನಿಸಿದ್ದಾರೆ.