Monday, December 23, 2024

ನಾನು ‘ಯಾವುದೇ ಸ್ಥಾನಮಾನದ ಆಕಾಂಕ್ಷಿ’ ಅಲ್ಲ : ಜಗದೀಶ್ ಶೆಟ್ಟರ್

ಬೆಂಗಳೂರು : ನಾನು ಯಾವುದೇ ಸ್ಥಾನಮಾನದ ಆಕಾಂಕ್ಷಿ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಿಳಿಸಿದರು.

ಬೆಂಗಳೂರಿನಲ್ಲಿ ನಿಯೋಜಿತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾದ ಜಗದೀಶ್ ಶೆಟ್ಟರ್ ಅವರು ಸಿದ್ದರಾಮಯ್ಯ ಅವರಿಗೆ ಹೂಗುಚ್ಚ ನೀಡಿ ಅಭಿನಂದನೆ ಸಲ್ಲಿಸಿದರು.

ಬಳಿಕ ಮಾತನಾಡಿದ ಜಗದೀಶ್ ಶೆಟ್ಟರ್, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಆಯ್ಕೆಯಾದ ಹಿನ್ನಲೆಯಲ್ಲಿ ಅವರನ್ನು ಅಭಿನಂದನೆ ಸಲ್ಲಿಸಿಲು ಬಂದಿದ್ದೆ. ಬೇರೆ ಯಾವುದೇ ಚರ್ಚೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ನಾನು ಯಾವುದೇ ಸ್ಥಾನಮಾನದ ಆಕಾಂಕ್ಷಿಯಲ್ಲ. ಕಾಂಗ್ರೆಸ್ ಮತ್ತು ಹೈಕಮಾಂಡ್ ನಾಯಕರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧ. ಹೈಕಮಾಂಡ್ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ ಎಂದು ಜಗದೀಶ್ ಶೆಟ್ಟರ್ ತಿಳಿಸಿದರು.

ಇದನ್ನೂ ಓದಿ : ನಾವು ಮತ್ತೆ ‘ರಾಜ್ಯದಲ್ಲಿ ಪುಟಿದೇಳುತ್ತೇವೆ’ : ಬಸವರಾಜ ಬೊಮ್ಮಾಯಿ

ಶೆಟ್ಟರ್ ಗೆ ಮಂತ್ರಿಗಿರಿ ಫಿಕ್ಸ್?

ಸಚಿವ ಸ್ಥಾನಕ್ಕೆ ತೆರೆಮರೆಯಲ್ಲಿ ಲಾಬಿ ಜೋರಾಗಿ ನಡೆಯುತ್ತಿದೆ. ಈ ಪೈಕಿ ಬೆಳಗಾವಿ ಜಿಲ್ಲೆಯ ಹಲವರು ಪೈಪೋಟಿಯಲ್ಲಿದ್ದಾರೆ. ಇದರ ನಡುವೆ ಸಿದ್ದರಾಮಯ್ಯ ಸಂಪುಟದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್‌ಗೂ ಮಂತ್ರಿಗಿರಿ ಫಿಕ್ಸ್ ಎನ್ನಲಾಗುತ್ತದೆ.

ಕಾಂಗ್ರೆಸ್‌ ಪಕ್ಷಕ್ಕೆ ಬಹುಮತ ಬರಲು ಲಿಂಗಾಯತ ಮತಗಳು ಕಾರಣವಾಗಿವೆ. ಶೆಟ್ಟರ್ ಲಿಂಗಾಯತ ಸಮುದಾಯದ ದೊಡ್ಡ ನಾಯಕ ಆಗಿರುವುದರಿಂದ, ಸಚಿವ ಸ್ಥಾನ ನೀಡಲು ಹೈಕಮಾಂಡ್ ಮುಂದಾಗಿದೆ ಎಂದು ವರದಿಯಾಗಿದೆ.

RELATED ARTICLES

Related Articles

TRENDING ARTICLES