Thursday, May 16, 2024

ಕಾಂಗ್ರೆಸ್ ಬಂದಾಯ್ತು, ‘ನಾವ್ಯಾಕೆ ಕರೆಂಟ್ ಬಿಲ್ ಕಟ್ಟಬೇಕು’

ಬೆಂಗಳೂರು : ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ ಎಂದು ಕಾಂಗ್ರೆಸ್ ಹೇಳಿದೆ. ಹೀಗಾಗಿ, ನಾವು ಕರೆಂಟ್ ಬಿಲ್ ಕಟ್ಟುವುದಿಲ್ಲ ಎಂದು ಕೊಳ್ಳೇಗಾಲ ಕ್ಷೇತ್ರದ ಹೊನ್ನೂರು ಜನ ಪಟ್ಟು ಹಿಡಿದಿದ್ದಾರೆ.

ಚುನಾವಣೆಗೂ ಮುನ್ನ ಕರೆಂಟ್ ಬಿಲ್ ಕಟ್ಟಬೇಡಿ ಅಂತ ಕಾಂಗ್ರೆಸ್ ಹೇಳಿತ್ತು. ಇದೀಗ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ನಾವ್ಯಾಕೆ ಕರೆಂಟ್ ಬಿಲ್ ಕಟ್ಟಬೇಕು ಎಂದು ಹೇಳಿದ್ದಾರೆ.

ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ ಎಂದು ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ಕಾಂಗ್ರೆಸ್ನ 3 ಶಾಸಕರನ್ನು ಗೆಲ್ಲಿಸಿದ್ದು, ನಾವು ಕರೆಂಟ್ ಬಿಲ್ ಕಟ್ಟೋದಿಲ್ಲ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಮಾತಿಗೆ ತಪ್ಪದೇ ಕೊಟ್ಟ ಭರವಸೆಯನ್ನು ಉಳಿಸಿಕೊಳ್ಳಬೇಕು. ಈ ಕೂಡಲೇ ಚೆಸ್ಕಾಂ ಸಿಬ್ಬಂದಿ ನಮಗೆ ಕರೆಂಟ್ ಬಿಲ್ ಕೊಡುವುದನ್ನು ನಿಲ್ಲಿಸಬೇಕು ಎಂದು ಹೊನ್ನೂರು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ‘ಸಿದ್ದು’ ಭಾರೀ ಬೆಂ’ಬಲ’ : ಪ್ರಮಾಣವಚನ ಸಮಾರಂಭಕ್ಕೆ 8 ರಾಜ್ಯಗಳ ಸಿಎಂಗಳು

ನಾವು ಬಿಲ್ ಕಟ್ಟಲ್ಲ ಎಂದು ನಾಮಫಲಕ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಗೆಲುವಿನ ನಗೆ ಬೀರಿದ್ದೇ ತಡ, ಇನ್ನು ನಾವು ಕೂಡ ಕರೆಂಟ್ ಬಿಲ್ ಕಟ್ಟಲ್ಲ ಎಂದು ರಾಜ್ಯದ ಜನ ಪಟ್ಟು ಹಿಡಿದಿದ್ದಾರೆ.

ಕ್ಷಮಿಸಿ, ಮೆಸ್ಕಾಂನವರೇ ಜೂನ್ ತಿಂಗಳಿಂದ ನಮಗೆ ಕರೆಂಟ್ ಬಿಲ್ ಕೊಡಬೇಡಿ. ನಾವು ಬಿಲ್ ಕಟ್ಟಲ್ಲ. ಹೀಗೆಂದು, ಉಡುಪಿಯ ಮನೆಯೊಂದರ ಮುಂದೆ ನಾಮಫಲಕ ಅಳವಡಿಕೆ ಮಾಡಲಾಗಿದೆ. ಉಡುಪಿಯ ಪೆರಂಪಳ್ಳಿ ನಿವಾಸಿ ವಾಸುದೇವ ಭಟ್ ಪೆರಂಪಳ್ಳಿ ಎಂಬುವವರು ಕರೆಂಟ್ ಬಿಲ್ ಕಟ್ಟುವುದಿಲ್ಲ ಎಂದು ಮನೆಯಲ್ಲಿ ಬೋರ್ಡ್ ಅಳವಡಿಸಿದ್ದಾರೆ.

RELATED ARTICLES

Related Articles

TRENDING ARTICLES