Wednesday, January 22, 2025

ಖ್ಯಾತ ನೇತ್ರ ತಜ್ಞ ಡಾ.ಕೆ ಭುಜಂಗಶೆಟ್ಟಿ ಹೃದಯಾಘಾತದಿಂದ ನಿಧನ

ಬೆಂಗಳೂರು : ನಾರಾಯಣ ನೇತ್ರಾಲಯದ ಮುಖ್ಯಸ್ಥ ಹಾಗೂ ಖ್ಯಾತ ನೇತ್ರ ತಜ್ಞ ಡಾ.ಕೆ. ಭುಜಂಗ ಶೆಟ್ಟಿ (69) ಅವರು ನಿಧನರಾಗಿದ್ದಾರೆ.

ಮನೆಯಲ್ಲಿದ್ದಾಗ ಅವರಿಗೆ ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ಯಶವಂತಪುರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಇಹಲೋಕ ತ್ಯಜಿಸಿದ್ದಾರೆ.

ಡಾ.ಕೆ ಭುಜಂಗಶೆಟ್ಟಿ ಇಂದು ಬೆಳಗ್ಗೆ ಲವಲವಿಕೆಯಿಂದಲೇ ಆಸ್ಪತ್ರೆಗೆ ಹೋಗಿದ್ದರು. ಅಲ್ಲಿ ಚಿಕಿತ್ಸೆ ನೀಡಿ ಮನೆಗೆ ವಾಪಸ್ಸಾಗಿದ್ದರು. ಸಂಜೆ 6 ಗಂಟೆ ಸುಮಾರಿಗೆ ತೀವ್ರ ಹೃದಯಾಘಾತವಾಗಿದ್ದು, ಬಳಿಕ ಈ ಘಟನೆ ನಡೆದಿದೆ.

ಡಾ.ಕೆ ಭುಜಂಗಶೆಟ್ಟಿ ಅವರು ನಾರಾಯಣ ನೇತ್ರಾಲಯವನ್ನು ಕರ್ನಾಟಕದ ಅತಿದೊಡ್ಡ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಾಗಿ ಪರಿವರ್ತಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಕಣ್ಣಿನ ಪೊರೆ ಮತ್ತು ಫಾಕೋಎಮಲ್ಸಿಫಿಕೇಶನ್ ಶಸ್ತ್ರಚಿಕಿತ್ಸಕರಾಗಿದ್ದ ಅವರು, ನಾರಾಯಣ ನೇತ್ರಾಲಯದ ಅಧ್ಯಕ್ಷ ಕೂಡ ಆಗಿದ್ದರು.

ಬೊಮ್ಮಾಯಿ ಸಂತಾಪ

ಖ್ಯಾತ ನೇತ್ರ ತಜ್ಞರಾದ ಡಾ.ಕೆ ಭುಜಂಗ ಶೆಟ್ಟಿ ಅವರ ನಿಧನಕ್ಕೆ ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ. ನಿರ್ಗಮಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

ಸಾವಿರಾರು ಅಂಧರ ಬಾಳಿಗೆ ಬೆಳಕು

ಈ ಸಂಬಂಧ ಟ್ವೀಟ್ ಮಾಡಿರುವ ಬಸವರಾಜ ಬೊಮ್ಮಾಯಿ, ಖ್ಯಾತ ನೇತ್ರ ತಜ್ಞರಾದ ಡಾ.ಕೆ ಭುಜಂಗ ಶೆಟ್ಟಿ ಅವರು ಹೃದಯಾಘಾತದಿಂದ ನಿಧನರಾದ ವಿಷಯ ತಿಳಿದು ಅತ್ಯಂತ‌ ದುಃಖವಾಗಿದೆ‌. ಕಣ್ಣಿನ ಶಸ್ತ್ರಚಿಕಿತ್ಸೆ ಮೂಲಕ ಸಾವಿರಾರು ಅಂಧರ ಬಾಳಿಗೆ ಬೆಳಕಾಗಿದ್ದ ಭುಜಂಗ ಶೆಟ್ಟಿ ಅವರ ನಿಧನದಿಂದ ರಾಜ್ಯ ಒಬ್ಬ ನೇತ್ರ ತಜ್ಞನನ್ನು ಕಳೆದುಕೊಂಡಂತಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಸಂತಾಪ

RELATED ARTICLES

Related Articles

TRENDING ARTICLES