ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ,ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ನಾಳೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ಹೌದು, ಇದೇ ವೇಳೆ ಹಲವು ಶಾಸಕರೂ ಕೂಡ ಪ್ರಮಾಣವಚನ ಸ್ವೀಕಾರಿಸಲಿದ್ದಾರೆ. ಈ ಕಾರ್ಯಕ್ರಮ ಅದ್ಧೂರಿಯಾಗಿ ನೆಡಿಸಲು ಕಾಂಗ್ರೆಸ್ ಸಕಲ ಸಿದ್ದತೆ ಮಾಡಿಕೊಂಡಿದೆ. ಪ್ರಮಾಣವಚನ ಸ್ವೀಕಾರಕ್ಕೆ ಕಾಂಗ್ರೆಸ್ ಆಡಳಿತವಿರುವ ಹಾಗೂ ಸಮನವಯಸ್ಕ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳನ್ನು ಸಹಿತ ಕಾಂಗ್ರೆಸ್ ಆಹ್ವಾನಿಸಿದೆ.
ಪ್ರಮಾಣವಚನ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕಿ, ಸಂಸದೆ ಸೋನಿಯಾ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಪಕ್ಷದ ಇತರ ಹಿರಿಯ ನಾಯಕರು ಭಾಗವಹಿಸಲಿದ್ದಾರೆ.. ಇನ್ನು ಹಲವು ಗಣ್ಯರಿಗೆ ಆಹ್ವಾನ ನೀಡಲಾಗಿದೆ.. ಛತ್ತೀಸ್‌ಗಢ ಸಿಎಂ ಭೂಪೇಶ್ ಬಾಘೇಲ್, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಹಿಮಾಚಲ ಪ್ರದೇಶ ಸುಖವಿಂದರ್ ಸಿಂಗ್ ಸುಖು, ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್, ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್, ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇದೆ..