ಬೆಂಗಳೂರು: ರಾಜ್ಯವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದಿಂದ ಜಯಶಾಲಿಯಾಗಿದ್ದು, ನಾಳೆ ಕೈ ಶಾಸಕ ನಾಯಕನ ಪದಗ್ರಹಣ ನಡೆಯಲಿದೆ.
ಹೌದು, ಸಚಿವ ಸ್ಥಾನಕ್ಕೆ ಲಾಬಿ ತೆರೆಮರೆಯಲ್ಲಿ ಜೋರಾಗಿ ನಡೆಯುತ್ತಿದೆ. ಈ ಪೈಕಿ ಬೆಳಗಾವಿ ಜಿಲ್ಲೆಯ ಹಲವರು ಪೈಪೋಟಿಯಲ್ಲಿದ್ದಾರೆ. ಇದರ ಸಡುವೆ ಸಿದ್ದರಾಮಯ್ಯ ಸಂಪುಟದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್‌ಗೂ ಸ್ಥಾನ ಸಿಗುವ ಸಾಧ್ಯತೆಯಿದೆ.
ಕಾಂಗ್ರೆಸ್‌ಗೆ ಬಹುಮತ ಬರಲು ಲಿಂಗಾಯತ ಮತಗಳು ಕಾರಣವಾಗಿವೆ. ಶೆಟ್ಟರ್ ಲಿಂಗಾಯತ ಸಮುದಾಯದ ದೊಡ್ಡ ನಾಯಕ ಆಗಿರುವುದರಿಂದ, ಸಚಿವ ಸ್ಥಾನ ನೀಡಲು ಹೈಕಮಾಂಡ್ ಮುಂದಾಗಿದೆ ಎಂದು ವರದಿಯಾಗಿದೆ.
ಇನ್ನೂ ಇಂದು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವ ಶೆಟ್ಟರ್, ಯಾವುದೇ ಸ್ಥಾನಮಾನದ ಆಕಾಂಕ್ಷಿ ಅಲ್ಲ. ಹೈಕಮಾಂಡ್ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಸಂಪುಟ ಸೇರುವವರು ಯಾರು? ಎಂಬ ಲೆಕ್ಕಾಚಾರ ನಡೆಯುತ್ತಿದೆ. ಈ ನಡುವೆ ವಿಧಾನಸಭೆ ಚುನಾವಣೆಯಲ್ಲಿ ಸೋತ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಶುಕ್ರವಾರ ಸಿದ್ದರಾಮಯ್ಯ ಭೇಟಿ ಮಾಡಿದ್ದು ಕುತೂಹಲಕ್ಕೆ ಕಾರಣವಾಗಿದೆ. ಇನ್ನೂ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ದೆಹಲಿಯಲ್ಲಿ ಅಂತಿಮ ತೀರ್ಮಾನವಾಗಲಿದೆ.