Wednesday, January 22, 2025

ಸಿದ್ರಾಮಣ್ಣ.. ‘ಹೆಣ್ಮಕ್ಕಳು ಇವತ್ತೇ ಬಸ್ ಹತ್ತಲು ಸಿದ್ದ’ರಾಗಿದ್ದರು : ಬಸವರಾಜ ಬೊಮ್ಮಾಯಿ

ಬೆಂಗಳೂರು : ಕಾಂಗ್ರೆಸ್ ಪಕ್ಷ ‌ನಿಧಾನವಾಗಿ ತನ್ನ ಬಣ್ಣ ಬದಲಾಯಿಸುತ್ತಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ‌ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಹೆಣ್ಣು ಮಕ್ಕಳು ಇವತ್ತೇ ಬಸ್ ಹತ್ತಲು ತಯಾರಾಗಿದ್ದರು. ಆದರೆ, ಸಿದ್ದರಾಮಯ್ಯ ನಿರಾಶೆ ಮೂಡಿಸಿದ್ದಾರೆ ಎಂದು ಕುಟುಕಿದರು.

ಇಂದು ಕಾಂಗ್ರೆಸ್ ಸರ್ಕಾರದ ಮೊದಲ ಸಚಿವ ಸಂಪುಟದ ಬಳಿಕ ಸುದ್ದಿಗೋಷ್ಠಿಯಲ್ಲಿ ಬಹಳಷ್ಟು ವಿಷಯ ಹೇಳಿದ್ದಾರೆ. ಕರ್ನಾಟಕದ ಮಹಾಜನತೆ ಬಹಳ‌ ನಿರೀಕ್ಷೆ ಇಟ್ಟುಕೊಂಡಿದ್ದರು. ಕೇವಲ ಘೋಷಣೆ ಮಾತ್ರ ಮಾಡಿದ್ದಾರೆ. ಯಾವಾಗಿಂದ ಜಾರಿ ಅಂತಾ ವಿವರ ಹೇಳಿಲ್ಲ ಎಂದು ತಿಳಿಸಿದರು.

ಸಿದ್ದುಗೆ ಗುದ್ದಿದ ಬೊಮ್ಮಾಯಿ

ಮುಂದಿನ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ಹೇಳುತ್ತೇವೆ ಎಂದಿದ್ದಾರೆ. ಜನರ ನಿರೀಕ್ಷೆ ಹುಸಿಗೊಳಿಸುವ ಸಂಪುಟ ನಿರ್ಣಯ ಆಗಿದೆ. ಐದು ಗ್ಯಾರಂಟಿ ಜಾರಿಗೆ 50 ಸಾವಿರ ಕೋಟಿ ಆಗುತ್ತದೆ ಅಂತಾ ಹೇಳಿದ್ದಾರೆ. ಹಣಕಾಸು ಒದಗಿಸಲು ಯಾವುದೇ ಪೂರ್ವ ಆಲೋಚನೆ ಇಲ್ಲ ಅಂತಾ ಸ್ಪಷ್ಟವಾಗುತ್ತದೆ ಎಂದು ಸಿದ್ದುಗೆ ಬೊಮ್ಮಾಯಿ ಗುದ್ದಿದರು.

ಇದನ್ನೂ ಓದಿ : ಎಷ್ಟೇ ದುಡ್ಡು ಖರ್ಚಾದರೂ ಗ್ಯಾರಂಟಿ ಜಾರಿ ಮಾಡುತ್ತೇವೆ : ಸಿದ್ದರಾಮಯ್ಯ

ನೋಡಿ.. ಮತದಾರರಿಗೆ ಎಷ್ಟು ಗೌರವ ಕೊಡ್ತಾರೆ

ದಾರಿಯಲ್ಲಿ ಹೋಗುವವರಿಗೆ ಗ್ಯಾರಂಟಿ ಕೊಡಲು ಆಗುತ್ತಾ ಅಂತಾ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ದಾರಿಯಲ್ಲಿದ್ದವರು, ಮನೆಯಲ್ಲಿದ್ದವರು ಎಲ್ಲರೂ ಸೇರಿಯೇ ವೋಟ್ ಹಾಕಿದ್ದಾರೆ. ಈಗ ಮತದಾರರಿಗೆ ಎಷ್ಟು ಗೌರವ ಕೊಡುತ್ತಿದ್ದಾರೆ ಅಂತಾ ಗೊತ್ತಾಗುತ್ತದೆ. ಕಾಂಗ್ರೆಸ್ ‌ನಿಧಾನವಾಗಿ ತನ್ನ ಬಣ್ಣ ಬದಲಾಯಿಸುತ್ತಿದೆ ಎಂದು ಛೇಡಿಸಿದರು.

ಕಾಂಗ್ರೆಸ್ ಮನಸ್ಸು ‌ಮಾಡಿದರೆ ನಾಳೆಯೇ ೨೦೦೦ ರೂ ಹಾಕಬಹುದು. ಬಿಪಿಎಲ್ ಕಾರ್ಡ್ ದಾರರ ಬಗ್ಗೆ ರಾಜ್ಯ ಸರ್ಕಾರದ ಬಳಿ ಈಗಾಗಲೇ ಮಾಹಿತಿ ಇದೆ. ಮನಸ್ಸಿದ್ದರೆ ಮಾತ್ರ ಮಾರ್ಗ. ಈ ವರ್ಷ ಪಾಸಾದ ಪದವೀಧರರಿಗೆ ಭತ್ಯೆ ಅಂತಾ ಹೇಳಿದ್ದಾರೆ. ವಿದ್ಯುತ್ ಉಚಿತ ನೀಡಲು ಕುಂಟು ನೆಪ ಎಂದು ಬೊಮ್ಮಾಯಿ ವಾಗ್ದಾಳಿ ನಡೆಸಿದರು.

RELATED ARTICLES

Related Articles

TRENDING ARTICLES