Thursday, December 19, 2024

ಕೆಲವೇ ಕ್ಷಣಗಳಲ್ಲಿ ಕಾಂಗ್ರೆಸ್ ನ ಐದು ಗ್ಯಾರಂಟಿ ಘೋಷಣೆ

ಬೆಂಗಳೂರು: ಚುನಾವಣೆಗೂ ಮುನ್ನ ಕಾಂಗ್ರೆಸ್ ಘೋಷಿಸಿದ್ದ ಐದು ಉಚಿತ ಗ್ಯಾರಂಟಿಗಳನ್ನು ಇನ್ನೂ ಕೆಲವೇ ಕ್ಷಣದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತರಲಿದೆ. 

ಹೌದು, ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮೊದಲ ಕ್ಯಾಬಿನೆಟ್ ಸಭೆ ನಡೆಯಲ್ಲಿದ್ದು ಈ ಬಗ್ಗೆ ಚರ್ಚೆ ನಡೆಸಿ ಕಾರ್ಯರೂಪಕ್ಕೆ ತರಲಾಗುತ್ತದೆ.

ಇನ್ನೂ ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Elections 2023) ಕಾಂಗ್ರೆಸ್ ಜಯಭೇರಿ  ಭಾರಿಸಿ ನಿಚ್ಚಳ ಬಹುಮತದೊಂದಿಗೆ ಸರಕಾರ ರಚಿಸುತ್ತಿದೆ. ಈ ಚುನಾವಣೆಯಲ್ಲಿ ಗಮನ ಸೆಳೆದ ವಿಚಾರಗಳಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ (Congress Poll Promises) ಕೊಡಲಾದ ಭರವಸೆ. ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷ 5 ಗ್ಯಾರಂಟಿಗಳ ಸಹಿತ ಹಲವು ಆಶ್ವಾಸನೆಗಳನ್ನು ಕೊಟ್ಟಿದೆ. ಅದರಲ್ಲಿ ಪ್ರಮುಖವಾದುದು ಗೃಹ ಜ್ಯೋತಿ, ಗೃಹ ಲಕ್ಷ್ಮೀ, ಅನ್ನ ಭಾಗ್ಯ, ಯುವ ನಿಧಿ, ಶಕ್ತಿ ಎಂಬ ಐದು ಗ್ಯಾರಂಟಿಗಳು.

 

 

RELATED ARTICLES

Related Articles

TRENDING ARTICLES