Saturday, December 28, 2024

ಸಿದ್ದರಾಮಯ್ಯ,ಡಿಕೆ ಶಿವಕುಮಾರ್​ ಜೊತೆ 8 ಶಾಸಕರ ಇಂದು ಪ್ರಮಾಣವಚನ ಸ್ವೀಕಾರ

ಬೆಂಗಳೂರು:  ರಾಜ್ಯದ ನೂತನ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಸಿದ್ದರಾಮಯ್ಯ (Siddaramaiah) ಅವರು ಹಾಗೂ ಮೊದಲ ಬಾರಿಗೆ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಅವರು ಇಂದು (ಮೇ 20) ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಹೌದು, ಇಂದು ಕಂಠೀರವ ಕ್ರೀಡಾಂಗಣದಲ್ಲಿ (Kanteerava Stadium) ಪದಗ್ರಹಣ ಸಮಾರಂಭ ನಡೆಯಲಿದ್ದು, ಸಿದ್ದರಾಮಯ್ಯ,ಡಿಕೆಸಿವಕುಮಾರ್​ ಜೊತೆ 8 ಶಾಸಕರು ಪ್ರಮಾಣವಚನ ಸ್ಚೀಕರಿದ್ದು ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್ (Thawar Chand Gehlot) ಅವರು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.

10 ಮಂದಿ ಸಚಿವರು ಇಂದು ಪ್ರಮಾಣವಚನ ಸ್ವೀಕಾರ

ಕಾಂಗ್ರೆಸ್​​ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​​ ಸೇರಿದಂತೆ 10 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರಲ್ಲಿ ಇಂದು 8 ಶಾಸಕರು ಮಾತ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಎಂ.ಬಿ. ಪಾಟೀಲ್, ಡಾ.ಜಿ.ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್​ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

RELATED ARTICLES

Related Articles

TRENDING ARTICLES