Thursday, April 3, 2025

ಭಾರತ್ ಜೋಡೋದಿಂದ ‘ದ್ವೇಷ ಸೋತಿದೆ, ಪ್ರೀತಿ ಗೆದ್ದಿದೆ’ : ರಾಹುಲ್ ಗಾಂಧಿ

ಬೆಂಗಳೂರು : ಭಾರತ್ ಜೋಡೋ ಯಾತ್ರೆಯಿಂದ ದ್ವೇಷ ಸೋತಿದೆ, ಪ್ರೀತಿ ಗೆದ್ದಿದೆ ಎಂದು ಕಾಂಗ್ರೆಸ್​​ ನಾಯಕ ರಾಹುಲ್ ಗಾಂಧಿ ಹೇಳಿದರು.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ರಾಜ್ಯದ ನೂತನ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕರ್ನಾಟಕದ ಜನರಿಗೆ ಮನಃಪೂರ್ವಕವಾಗಿ ಅಭಿನಂದನೆಗಳು. ಕಾಂಗ್ರೆಸ್​​ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿದ್ದಕ್ಕೆ ಅಭಿನಂದನೆಗಳು ಎಂದರು.

ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ನೀಡಿತ್ತು. ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಯುವನಿಧಿ ಗ್ಯಾರಂಟಿಗಳನ್ನು ನಾವು ನೀಡಿದ್ದೆವು. ಎಲ್ಲವನ್ನೂ ಈಡೇರಿಸುತ್ತೇವೆ ಎಂದು ರಾಹುಲ್ ಭರವಸೆ ನೀಡಿದರು.

ಪ್ರೀತಿ, ಶಕ್ತಿ ನೀಡಿದ್ದನ್ನು ಮರೆಯಲ್ಲ

ಕೆಲವೇ ಹೊತ್ತಿನಲ್ಲಿ ನೂತನ ಸರ್ಕಾರ ಸಂಪುಟ ಸಭೆ ನಡೆಯಲಿದೆ. ಸಚಿವ ಸಂಪುಟ ಸಭೆಯಲ್ಲಿ ಎಲ್ಲ ಗ್ಯಾರಂಟಿಗಳು ಅನುಮೋದನೆ ಆಗಲಿದೆ. ಜನರು ಪ್ರೀತಿ, ಶಕ್ತಿ ಕಾಂಗ್ರೆಸ್​​ಗೆ ನೀಡಿದ್ದನ್ನು ಮರೆಯಲು ಸಾಧ್ಯವಿಲ್ಲ ಎಂದು ಹೇಳಿದರು.

ಇದನ್ನೂ ಓದಿ : ಇಂಗ್ಲಿಷ್ ನಲ್ಲೇ ಪ್ರಮಾಣವಚನ ಸ್ವೀಕರಿಸಿದ ಜಮೀರ್ ಅಹಮದ್

ನಾವು ಸುಳ್ಳು ಆಶ್ವಾಸನೆ ನೀಡುವುದಿಲ್ಲ. ಕೊಟ್ಟ ಮಾತನ್ನು ನಾವು ಉಳಿಸಿಕೊಳ್ಳುತ್ತೇವೆ. ನುಡಿದಂತೆ ನಡೆಯುತ್ತೇವೆ. ಮುಂದಿನ ಕೆಲವೇ ಗಂಟೆಗಳಲ್ಲಿ ರಾಜ್ಯದ ನೂತನ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಈ ಐದೂ ಗ್ಯಾರಂಟಿ ಯೋಜನೆಗಳು ಕಾನೂನು ರೂಪಪಡೆದು ಜಾರಿಗೆ ಬರಲಿದೆ. ನಾವು ಹೇಳಿದ್ದನ್ನು ಮಾಡಿ ತೋರಿಸುತ್ತೇವೆ. ಸರ್ಕಾರದ ಆದ್ಯತೆ ರೈತರು, ಕಾರ್ಮಿಕರು, ಸಣ್ಣ ವ್ಯಾಪಾರಿಗಳು, ಯುವಕರ ಹಿತ ಕಾಪಾಡಿ ಅವರ ಭವಿಷ್ಯ ಭದ್ರಗೊಳಿಸುವುದಾಗಿದೆ ಎಂದರು.

ಇಂದೇ 5 ಗ್ಯಾರಂಟಿಗಳನ್ನು ಜಾರಿ

ನಾವು ನುಡಿದಂತೆ ನಡೆಯುತ್ತೇವೆ, ಇಂದು ನಡೆಯುವ ಮೊದಲ ಸಂಪುಟ ಸಭೆಯಲ್ಲೇ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ ಎಂದು ರಾಜ್ಯದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.

ಕರ್ನಾಟಕದ ಜನರ ಆಶೀರ್ವಾದಿಂದ ನಮ್ಮ ಪಕ್ಷ ಅಧಿಕಾರಕ್ಕೆ ಬಂದಿದೆ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ಸೇರಿ ಅನೇಕರು ರಾಜ್ಯದಲ್ಲಿ ಪ್ರಚಾರ ಮಾಡಿದ್ದರು. ಕಾಂಗ್ರೆಸ್​ ಪಕ್ಷದ ಪರ ಪ್ರಚಾರ ಮಾಡಿದ ಎಲ್ಲರಿಗೂ ಧನ್ಯವಾದ ಎಂದಿದ್ದಾರೆ.

RELATED ARTICLES

Related Articles

TRENDING ARTICLES