Thursday, December 19, 2024

ಇಂದೇ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ ಎಂದು ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಚುನಾವಣೆಗೂ ಮುನ್ನ ಕಾಂಗ್ರೆಸ್ ಘೋಷಿಸಿದ್ದ ಐದು ಉಚಿತ ಗ್ಯಾರಂಟಿಗಳನ್ನು ಇಂದೇ ನಮ್ಮ ಸರ್ಕಾರ ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಹೌದು, ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪದಗ್ರಹಣ ಸಮಾರಂಭದಲ್ಲಿ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ ಮಾಡಿ ಮಾತನಾಡಿದ ಅವರು ಕಾಂಗ್ರೆಸ್​ ಪಕ್ಷದ ಪರ ಪ್ರಚಾರ ಮಾಡಿದ ಎಲ್ಲರಿಗೂ ಧನ್ಯವಾದ. ಸಾಹಿತಿಗಳು, ಚಿಂತಕರು, ಸಂಘಟನೆಗಳಿಗೂ ಧನ್ಯವಾದ ಹೇಳುತ್ತೇನೆ. ವಿವಿಧ ರಾಜ್ಯಗಳ ನಾಯಕರು ನಮಗೆ ಶುಭ ಹಾರೈಸಲು ಬಂದಿದ್ದರು. ರಾಜ್ಯದ ಜನರ ನಿರೀಕ್ಷೆಗೆ ತಕ್ಕಂತೆ ನಾವು ಆಡಳಿತ ನಡೆಸುತ್ತೇವೆ.

ಇಂದೇ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ. ಕರ್ನಾಟಕದ ಜನರಿಗೆ ನಾವು ನೀಡಿದ ಭರವಸೆ ಈಡೇರಿಸುತ್ತೇವೆ. ನಾವು ನುಡಿದಂತೆ ನಡೆಯುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

RELATED ARTICLES

Related Articles

TRENDING ARTICLES