Monday, December 23, 2024

ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಪ್ರತಿಜ್ಞಾವಿಧಿ ಸ್ವೀಕಾರ

ಬೆಂಗಳೂರು: ಕರ್ನಾಟಕದ ನೂತನ ಸರ್ಕಾರಕ್ಕೆ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಿದರುದ್ದಾರೆ .

ಹೌದು, ಕಂಠೀರವ ಕ್ರೀಡಾಂಗಣದಲ್ಲಿ (Kanteerava Stadium) ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್ (Thawar Chand Gehlot) ಅವರು ಪ್ರತಿಜ್ಞಾವಿಧಿ ಬೋಧಿಸಿದ್ದರು.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪದಗ್ರಹಣ ಸಮಾರಂಭ ನಡೆಯುತ್ತಿದ್ದು ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿದ್ದರಾಮಯ್ಯಗೆ ಪ್ರತಿಜ್ಞಾವಿಧಿ ಬೋಧಿಸಿದ್ದು ದೇವರ ಹೆಸರಿನಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಿದರು.

10 ಮಂದಿ ಸಚಿವರು ಇಂದು ಪ್ರಮಾಣವಚನ ಸ್ವೀಕಾರ

ಕಾಂಗ್ರೆಸ್​​ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​​ ಸೇರಿದಂತೆ 10 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರಲ್ಲಿ ಇಂದು 8 ಶಾಸಕರು ಮಾತ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಎಂ.ಬಿ. ಪಾಟೀಲ್, ಡಾ.ಜಿ.ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್​ ಪ್ರಮಾಣವಚನ ಸ್ವೀಕರಿಸಿದ್ದಾರೆ.

ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಪ್ರಮಾಣ ವಚನ ಸ್ಚೀಕರಿಸಿದ್ದರು.

RELATED ARTICLES

Related Articles

TRENDING ARTICLES