Monday, December 23, 2024

‘ಶಿವ’ ರಾಮಯ್ಯ ಪಟ್ಟಾಭಿಷೇಕ್ಕೆ ಹೇಗಿದೆ ಸಿದ್ಧತೆ..?

ಬೆಂಗಳೂರು: ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 

ಹೌದು, ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ(Kanteerava Stadium) ಇಂದು ಮಧ್ಯಾಹ್ನ 12.30ಕ್ಕೆ ರಾಜ್ಯದ ಸಿಎಂ ಆಗಿ ಎರಡನೇ ಬಾರಿ ಸಿದ್ದರಾಮಯ್ಯ(Siddaramaiah) ಹಾಗೂ ಮೊದಲ ಬಾರಿ ಡಿಸಿಎಂ ಆಗಿ ಡಿಕೆ ಶಿವಕುಮಾರ್(DK Shivakumar) ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ(Oath taking Ceremony). ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೊಟ್ ಇಬ್ಬರೂ ನಾಯಕರಿಗೆ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ.

ಹೇಗಿದೆ ಸಿದ್ಧತೆ..?

ಕಂಠೀರವ ಸ್ಟೇಡಿಯಂ ಸುತ್ತು ಎಲ್ಲೆಲ್ಲೂ ಸಿದ್ದರಾಮಯ್ಯ, ಡಿಕೆಶಿ ಫ್ಲೆಕ್ಸ್, ಬ್ಯಾನರ್​ಗಳು ರಾರಾಜಿಸುತ್ತಿವೆ. ಇನ್ನು ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸಲು ಅಭಿಮಾನಿಗಳು, ಕಾರ್ಯಕರ್ತರು. ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಆಗಮಿಸುತ್ತಿದ್ದಾರೆ.

ಇನ್ನೂ ಕ್ರೀಡಾಂಗಣದಲ್ಲಿ ಮೂರು ವೇದಿಕೆಗಳನ್ನು ನಿರ್ಮಿಸಲಾಗಿದ್ದು, ಮಧ್ಯದಲ್ಲಿರುವ ಪ್ರಧಾನ ವೇದಿಕೆಯಲ್ಲಿ ಸಿಎಂ,ಡಿಸಿಎಂ ಮತ್ತು ಸಚಿವರ ಪ್ರಮಾಣವಚನ ಸ್ವೀಕಾರ ನಡೆಯಲಿದೆ.ಪಕ್ಕದಲ್ಲಿರುವ ವೇದಿಕೆಗಳಲ್ಲಿ ಅತಿಗನ್ಉ ಅತಿಥಿಗಳು ಮತ್ತು ನೂತನ ಸಚಿವರು ಕುಳಿತುಕೊಳ್ಳಲಿದ್ದಾರೆ. ವೇದಿಕೆಯ ಹಿಂಭಾಗವನ್ನು ಕೇಸರಿ, ಬಿಳಿ, ಹಸಿರು ಬಣ್ಣಗಳಿಂದ ಅಲಂಕರಿಸಲಾಗಿದೆ.ಒಂದು ಲಕ್ಷ ಜನರು ಸೇರುವ ನಿರೀಕ್ಷೆಯಿದೆ.

ವಾಹನಗಳ ನಿಲುಗಡೆಗೆ ವ್ಯವಸ್ಥೆ: ಸೇಂಟ್ ಜೋಸೆಫ್ ಕಾಲೇಜು ಮೈದಾನದಲ್ಲಿ ಗಣ್ಯರ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಇತರೆ ವಾಹನ ಬಿಬಿಎಂಪಿ ಮುಖ್ಯ ಕಚೇರಿ ಆವರಣ, ಬಾದಾಮಿ ಹೌಸ್, ಯುನೈಟೆಡ್ ಮಿಷನ್ ಕಾಲೇಜು ಮೈದಾನದಲ್ಲಿ ನಿಲ್ಲಿಸಲು ಅವಕಾಶ ನೀಡಲಾಗಿದೆ. ಕಸ್ತೂರಬಾ ರಸ್ತೆ, ಮಲ್ಯ ಆಸ್ಪತ್ರೆ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧ ಹೇರಲಾಗಿದ್ದು, ಅರಮನೆ ಮೈದಾನದಲ್ಲಿ ಸಾರ್ವಜನಿಕರ ವಾಹನಗಳ ನಿಲುಗಡೆಗೆ ಸೂಚನೆ ನೀಡಲಾಗಿದೆ.

ಸಂಚಾರ ದಟ್ಟಣೆ ನಿರೀಕ್ಷೆ: ಮಧ್ಯಾಹ್ನ ಹೊತ್ತಿಗೆ ಕಂಠೀರವ ಕ್ರೀಡಾಂಗಣ ಸುತ್ತಮುತ್ತ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಯಿದೆ. ಈ ಹಿನ್ನೆಲೆ ನಗರದಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಬೆಳಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಕೆಲವು ರಸ್ತೆಗಳು ಬಂದ್ ಆಗಿರಲಿವೆ. ಕ್ವೀನ್ಸ್​ ವೃತ್ತದಿಂದ ಸಿದ್ದಲಿಂಗಯ್ಯ ವೃತ್ತದವರೆಗೆ ವಾಹನಗಳಿಗೆ ನಿರ್ಬಂಧ ಹೇರಲಾಗಿದೆ.

 

 

 

 

RELATED ARTICLES

Related Articles

TRENDING ARTICLES