Sunday, November 3, 2024

ನಾಳೆಯಿಂದಲೇ ಅನ್ವಯ.. ಸಿಎಂ ಸಿದ್ದರಾಮಯ್ಯ ಮತ್ತೊಂದು ನಿರ್ಧಾರ

ಬೆಂಗಳೂರು : ನನಗೆ ಝಿರೋ ಟ್ರಾಫಿಕ್ ಸೌಲಭ್ಯ ಬೇಡ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ನಾಳೆಯಿಂದ ಸಾರ್ವಜನಿಕರಿಂದ ಗೌರವ, ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ.

ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯ. ಪ್ರೀತಿ, ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಬಹುದು. ನಿಮ್ಮೆಲ್ಲರ ಪ್ರೀತಿ, ಅಭಿಮಾನ ಸದಾ ನನ್ನ ಮೇಲಿರಲಿ ಎಂದು ಸಿದ್ದರಾಮಯ್ಯ ಟ್ವೀಟ್ ನಲ್ಲಿ ಉಲ್ಲೇಖ ಮಾಡಿದ್ದಾರೆ.

ಇದಕ್ಕೂ ಮೊದಲು ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ, ‘ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಝಿರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ. ಝಿರೋ ಟ್ರಾಫಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಹೇಳಿದ್ದರು.

ಇದನ್ನೂ ಓದಿ : ಇದು ‘ನನ್ನ ಹೆಂಡ್ತಿ ಕೊಟ್ಟ ಹೊಸ ವಾಚ್’ : ಸಿದ್ದರಾಮಯ್ಯ ಫುಲ್ ಖುಷ್

ಸಿದ್ದು ನಿರ್ಧಾರಕ್ಕೆ ಮೆಚ್ಚುಗೆ

ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ರಾಜ್ಯದ ಜನತೆ ಹಾಗೂ ನೆಟ್ಟಿಗರು ಬೇಷ್ ಎಂದಿದ್ದಾರೆ. ಸಿಎಂ, ಡಿಸಿಎಂ ಅಥವಾ ಉನ್ನತ ಹುದ್ದೆಗೇರಿದ ನಂತರ ಝಿರೋ ಟ್ರಾಫಿಕ್ ಬೇಕು ಎಂದು ಕೆಲವರು ಪಟ್ಟು ಹಿಡಿಯುತ್ತಾರೆ. ಇಂಥವರ ಮಧ್ಯೆ ಸಿದ್ದರಾಮಯ್ಯ ಅವರು ಮಹತ್ವದ ನಿರ್ಧಾರ ಕೈಗೊಂಡಿರುವುದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಕೆಲವರು, ಝಿರೋ ಟ್ರಾಫಿಕ್ ಇಲ್ಲದೆ ಸಿಎಂ ಓಡಾಟ ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

RELATED ARTICLES

Related Articles

TRENDING ARTICLES