Sunday, December 22, 2024

ಕಾಂಗ್ರೆಸ್ ‘ಕಾರ್ಯಕರ್ತರಿಗೆ ಒಳ್ಳೆಯದಾಗಲಿ’ : ಯಡಿಯೂರಪ್ಪ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ನೂತನ ಕಾಂಗ್ರೆಸ್ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಶಿವಮೊಗ್ಗ ಪ್ರವಾಸ ಹೊರಟಿದ್ದೇನೆ. ಕಾಂಗ್ರೆಸ್ ಪಕ್ಷ ಮನೆ ಮನೆಗೆ ಗ್ಯಾರಂಟಿ ಹಂಚಿದ್ದರು. ಅದು ಬಹಳ ಪರಿಣಾಮ‌ ಬೀರಿದೆ. ಇದು ನಮ್ಮ ಪಕ್ಷದ ಹಿನ್ನೆಡೆಗೆ  ಕಾರಣ ಎಂದು ಹೇಳಿದ್ದಾರೆ.

ಈಗಾಗಲೇ ಭರವಸೆ ಈಡೇರಿಸೋದಾಗಿ ಕಾಂಗ್ರೆಸ್‌ನವರು ಹೇಳಿದ್ದಾರೆ. ಕಾಂಗ್ರಸ್ ಕಾರ್ಯಕರ್ತರಿಗೆ ಒಳ್ಳೆಯದಾಗಲಿ. ಇದೇ ವೇಳೆ ಬಿಜೆಪಿ ಸರ್ಕಾರದ ಹಗರಣ ತನಿಖೆ ಮಾಡುವ ವಿಚಾರ ಸಂಬಂಧ ಯಾವುದೇ ಹಗರಣವನ್ನು ಮಾಡಿದ್ರೆ, ತಪ್ಪು ಮಾಡಿದ್ರೆ ಶಿಕ್ಷೆ ಆಗಲಿ. ಅದಕ್ಕೆ ನಾವು ಚಿಂತೆ ಮಾಡಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ‘ಶಿವ-ರಾಮಯ್ಯ’ ಸರ್ಕಾರಕ್ಕೆ ಪರಿಪೂರ್ಣ ಬೆಂಬಲ : ಹೆಚ್.ಡಿ ಕುಮಾರಸ್ವಾಮಿ

ಐದು ಉಚಿತ ಗ್ಯಾರಂಟಿಗಳನ್ನು ಹಾದಿ ಬೀದಿಯಲ್ಲಿ ಹೋಗೋರಿಗೆ ಕೊಡಲ್ಲ ಅನ್ನೋ ಡಿಕೆಶಿ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೊಟ್ಟಿರುವ ಭರವಸೆಯನ್ನು ಈಡೇರಿಸಲಿದ್ದಾರೆ. ಅವರ ಐದು ಬರವಸೆ ಈಡೇರಿಸುತ್ತಾರೆ ಎಂಬ ಭರವಸೆ ಇದೆ ಎಂದು ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ರಾಜ್ಯದ ಮುಖ್ಯಮಂತ್ರಿಗಳಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಿದ್ದರಾಮಯ್ಯ ಅವರಿಗೆ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಲ್ಲರಿಗೂ ಹಾರ್ದಿಕ ಅಭಿನಂದನೆಗಳು ಎಂದು ಟ್ವೀಟ್ ಮಾಡಿ ಶುಭಾಶಯ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES