Monday, December 23, 2024

ಇದು ‘ನನ್ನ ಹೆಂಡ್ತಿ ಕೊಟ್ಟ ಹೊಸ ವಾಚ್’ : ಸಿದ್ದರಾಮಯ್ಯ ಫುಲ್ ಖುಷ್

ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಪಟ್ಟ ಅಲಂಕರಿಸಿರುವ ಸಿದ್ದರಾಮಯ್ಯ ಅವರಿಗೆ ಪತ್ನಿ ಪಾರ್ವತಿ ಹೊಸ ವಾಚ್ ಅನ್ನು ಗಿಫ್ಟ್ ​ನೀಡಿದ್ದಾರೆ.

ಹೌದು, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಕಿಕೊಂಡು ಬಂದಿದ್ದ ವಾಚ್​ ಎಲ್ಲರ ಗಮನ ಸೆಳೆದಿದೆ.

ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಸಚಿವ ಎಂ.ಬಿ ಪಾಟೀಲ್ ಅವರು ಸಿದ್ದರಾಮಯ್ಯರ ಕೈಯಲ್ಲಿ ಆಕರ್ಷಕವಾಗಿ ಕಾಣಿಸುತ್ತಿದ್ದ ವಾಚ್​ ಅನ್ನು ಮುಟ್ಟಿ ಮುಟ್ಟಿ ನೋಡಿದ್ದಾರೆ.

ಇಂದು ಕೆಪಿಸಿಸಿ ಕಚೇರಿಯಲ್ಲಿ ರಾಜೀವ್ ಗಾಂಧಿ ಅವರ ಪುಣ್ಯತಿಥಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಗಿಫ್ಟ್ ನೀಡಿದ್ದ RADO ವಾಚ್ ಅನ್ನು ಕಟ್ಟಿಕೊಂಡು ಬಂದಿದ್ದರು. ಪದೇ ಪದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ವಾಚ್ ಅನ್ನು ನೋಡುತ್ತಿದ್ದರು. ಇದು ಎಲ್ಲರ ಗಮನಸೆಳೆದಿದೆ.

ಇದನ್ನೂ ಓದಿ : ಕಾಂಗ್ರೆಸ್ ‘ಕಾರ್ಯಕರ್ತರಿಗೆ ಒಳ್ಳೆಯದಾಗಲಿ’ : ಯಡಿಯೂರಪ್ಪ

ದ್ವೇಷದ ರಾಜಕಾರಣ ಅಂತ್ಯ

ರಾಜೀವ್ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದ್ವೇಷದ ರಾಜಕಾರಣವನ್ನು ಕೊನೆಗಾಣಿಸುವುದೇ ನಾವು ರಾಜೀವ್ ಗಾಂಧಿಯವರಿಗೆ ಸಲ್ಲಿಸುವ ನಿಜವಾದ ಗೌರವ ಎಂದರು.

ಬಿಜೆಪಿ ಇರುವವರೆಗೂ ಸಮಾಜದಲ್ಲಿ ಶಾಂತಿ, ನೆಮ್ಮದಿ ಸಾಮರಸ್ಯ ಇರುವುದಿಲ್ಲ. ಬಡವರು, ದಲಿತರು, ಹಿಂದುಳಿದವರು ದೇಶದ ಅನೇಕ ಭಾಗಗಳಲ್ಲಿ ಆತಂಕದಲ್ಲಿ ಬದುಕುತ್ತಿದ್ದಾರೆ. ಜಗತ್ತು ಮತ್ತು ದೇಶದಲ್ಲಿ ಶಾಂತಿ ನೆಲೆಸಿದ್ದರೆ ಮಾತ್ರ ಮನುಕುಲ ಉದ್ಧಾರವಾಗುತ್ತದೆ ಎಂದು ಹೇಳಿದರು.

RELATED ARTICLES

Related Articles

TRENDING ARTICLES