Monday, December 23, 2024

ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ, MI ಪ್ಲೇಆಫ್ ಗೆ ಹೋಗುತ್ತಾ? ಇಲ್ವಾ?

ಬೆಂಗಳೂರು : ಐಪಿಎಲ್ ನಲ್ಲಿ ಇಂದು ಮಾಜಿ ಚಾಂಪಿಯನ್ಸ್ ಗಳಾದ ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಕಾದಾಡಲಿವೆ.

ಮುಂಬೈಯ ವಾಂಖೆಡೆ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದ್ದು, ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಇಂದು ಲೀಗ್ ಹಂತದ ಕೊನೆಯ ಪಂದ್ಯಗಳು ನಡೆಯುತ್ತಿವೆ. ಮೊದಲ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವೆ ನಡೆಯಲಿದೆ. ಮುಂಬೈ ತಂಡ ಪ್ಲೇ ಆಫ್‌ ಗೆ ಹೋಗುವ ಕನಸನ್ನು ಜೀವಂತವಾಗಿ ಉಳಿಸಿಕೊಳ್ಳಲು, ಹೈದರಾಬಾದ್ ವಿರುದ್ಧ ದೊಡ್ಡ ಅಂತರದಿಂದ ಗೆಲ್ಲಲೇಬೇಕಿದೆ.

ಇದನ್ನೂ ಓದಿ : 14 ಸೀಸನ್, 12 ಪ್ಲೇಆಫ್, 9 ಫೈನಲ್ಸ್, 4 ಟ್ರೋಫಿ, ಒಬ್ಬ ಕ್ಯಾಪ್ಟನ್ = ಎಂ.ಎಸ್ ಧೋನಿ

ಮುಂಬೈ ಇಂಡಿಯನ್ಸ್ ತಂಡ

ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್, ಕ್ಯಾಮರೋನ್ ಗ್ರೀನ್, ಸೂರ್ಯಕುಮಾರ್ ಯಾದವ್, ನೆಹಾಲ್ ವಧೇರಾ, ಟಿಮ್ ಡೇವಿಡ್, ಕ್ರಿಸ್ ಜೋರ್ಡಾನ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆಂಡಾರ್ಫ್, ಆಕಾಶ್ ಮಧ್ವಾಲ್, ಕುಮಾರ್ ಕಾರ್ತಿಕೇಯ

ಹೈದರಾಬಾದ್ ತಂಡ

ಏಡೆನ್ ಮಾರ್ಕ್ರಾಮ್(ನಾಯಕ), ಮಾಯಾಂಕ್ ಅಗರ್ವಾಲ್, ಹೆನ್ರಿಕ್ ಕ್ಲಾಸೆನ್(ವಿ.ಕೀ.), ವಿವ್ರಾಂತ್ ಶರ್ಮಾ, ಹ್ಯಾರಿ ಬ್ರೂಕ್, ನಿತೀಶ್ ಕುಮಾರ್ ರೆಡ್ಡಿ, ಗ್ಲೆನ್ ಫಿಲಿಪ್ಸ್, ಸನ್ವಿರ್ ಸಿಂಗ್, ಮಯಾಂಕ್ ದಾಗರ್, ಭುವನೇಶ್ವರ್ ಕುಮಾರ್, ಉಮರ್ ಮಲ್ಲಿಕ್

RELATED ARTICLES

Related Articles

TRENDING ARTICLES