Wednesday, May 1, 2024

ಇದು ‘ತುಘಲಕ್ ಸರ್ಕಾರದ ಢೋಂಗಿ ನೀತಿ’ : ಬಿಜೆಪಿ ಲೇವಡಿ

ಬೆಂಗಳೂರು : ಪ್ರಜಾಪ್ರಭುತ್ವವನ್ನಾಗಲಿ, ಪ್ರಜೆಗಳ ಅಭಿವ್ಯಕ್ತಿ ಸ್ವಾತಂತ್ರ್ಯವನ್ನಾಗಲಿ ಗೌರವಿಸುವ ಪಕ್ಷ ಕಾಂಗ್ರೆಸ್ ಅಲ್ಲ ಎಂದು ರಾಜ್ಯ ಬಿಜೆಪಿ ‘ಕೈ’ ವಿರುದ್ಧ ಕಿಡಿಕಾರಿದೆ.

ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವೊಂದನ್ನು ಹಾಕಿದ್ದ ಶಿಕ್ಷಕನನ್ನು ಅಮಾನತುಗೊಳಿಸಿರುವ ಸರ್ಕಾರದ ನಡೆಗೆ ಆಕ್ರೋಶ ಹೊರಹಾಕಿದೆ.

ರಾಜ್ಯದಲ್ಲಿ ತುಘಲಕ್ ಕಾಂಗ್ರೆಸ್ ಸರ್ಕಾರ ಬಂದೊಡನೆ ಸರ್ಕಾರದ ಢೋಂಗಿ ನೀತಿಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಶ್ನಿಸಿದರು ಎಂಬ ಕಾರಣಕ್ಕಾಗಿ ಶಿಕ್ಷಕರೊಬ್ಬರನ್ನು ವೃತ್ತಿಯಿಂದ ಅಮಾನತುಗೊಳಿಸಿರುವಂತಹ ಅಮಾನವೀಯ ಘಟನೆ ನಡೆದಿದೆ. ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣವಲ್ಲವೇ? ಎಂದು ಪ್ರಶ್ನೆ ಮಾಡಿದೆ.

ಪ್ರಜೆಗಳ ಧ್ವನಿಯನ್ನು ಹತ್ತಿಕ್ಕುವ ಕಾಂಗ್ರೆಸ್‌ ಪಕ್ಷದ ಈ ನಡೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ಅದೇ ರೀತಿಯಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಜವಾಬ್ದಾರಿಯುತ ವಿರೋಧ ಪಕ್ಷವಾಗಿ ನಾವು ಪ್ರಜೆಗಳ ಒಟ್ಟಿಗೆ ಅವರ ಧ್ವನಿಯಾಗಿ ಹೋರಾಟ ನಡೆಸಲಿದ್ದೇವೆ ಎಂದು ಬಿಜೆಪಿ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

ಇದನ್ನೂ ಓದಿ : ನನಗೆ ‘ಝೀರೋ ಟ್ರಾಫಿಕ್ ಸೌಲಭ್ಯ’ ಬೇಡ : ಸಿಎಂ ಸಿದ್ದರಾಮಯ್ಯ

ಅಶ್ಲೀಲವಾಗಿ ನಿಂದಿಸುವುದನ್ನು ಸಹಿಸಲ್ಲ

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ನಾವು ಪ್ರಜಾಪ್ರಭುತ್ವ, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು  ಗೌರವಿಸುತ್ತೇವೆ ಎಂದು ಬಿಜೆಪಿಗೆ ಟಾಂಗ್ ಕೊಟ್ಟಿದೆ.

ಸಮಾಜದಲ್ಲಿ ದ್ವೇಷ ಬಿತ್ತುವುದು, ಸುಳ್ಳು ಸುದ್ದಿ ಹರಡುವುದು, ಸಾಮರಸ್ಯ ಕದಡುವುದು, ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ನಿಂದಿಸುವುದನ್ನು ಸಹಿಸುವುದಿಲ್ಲ. ನಮ್ಮ ಸರ್ಕಾರ ಈ ಬಗ್ಗೆ ಕಠಿಣ ನಿಲುವು ಹೊಂದಿದ್ದು, ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು ಎಂದು ಹೇಳಿದೆ.

RELATED ARTICLES

Related Articles

TRENDING ARTICLES