ಬೆಂಗಳೂರು : ಬಿಜೆಪಿ ಪಕ್ಷದಿಂದ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಇದೀಗ ಶೆಟ್ಟರ್ ಅವರಿಗೆ ಉನ್ನತ ಸ್ಥಾನಮಾನ ಕೊಡುವ ಬಗ್ಗೆ ಪಕ್ಷದಲ್ಲಿ ಚರ್ಚೆಯಾಗಿದೆ.
ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಎಂ.ಬಿ.ಪಾಟೀಲ್, ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ, ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ ಆಶೀರ್ವಾದ ಪಡೆದರು. ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದ್ದಾರೆ.
ಜಗದೀಶ್ ಶೆಟ್ಟರ್ ಅವರಿಗೆ ಪಕ್ಷದಲ್ಲಿ ಉನ್ನತ ಸ್ಥಾನಮಾನ ಕೊಡುವ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪಕ್ಷದ ನಾಯಕರು ಸೇರಿಕೊಂಡು ನಿರ್ಧಾರ ಕೈಗೊಳ್ಳಲಿದ್ದಾರೆ. ಜಗದೀಶ್ ಶೆಟ್ಟರ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತಂದಿದ್ದೇವೆ. ಚುನಾಣೆಯಲ್ಲಿ ಸೋಲಾಗಿದ್ದರೂ, ಅವರಿಗೆ ಸೂಕ್ತ ಸ್ಥಾನಮಾನ ಕೊಡಬೇಕೆಂದು ಎಲ್ಲರೂ ತೀರ್ಮಾನ ಮಾಡಿದ್ದೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಬರೀ 5 ಲಕ್ಷ ಕೊಟ್ಟರೆ ಪರಿಹಾರ ಅಲ್ಲ : ಡಿ.ಕೆ ಶಿವಕುಮಾರ್
ಲಿಂಗಾಯತರು ದೊಡ್ಡ ಪ್ರಮಾಣದಲ್ಲಿ ‘ಕೈ’ ಹಿಡಿದ್ದಾರೆ
ಚುನಾವಣೆಯಲ್ಲಿ ಲಿಂಗಾಯತ ಧರ್ಮದವರು ಸೇರಿದಂತೆ, ಎಲ್ಲಾ ಧರ್ಮದವರು ಬೆಂಬಲಿಸಿದ್ದಾರೆ. ಅಪಪ್ರಚಾರದಿಂದ ದೂರ ಇದ್ದಂತಹ ಲಿಂಗಾಯತರು ಚುನಾವಣೆಯ ಸಂದರ್ಭದಲ್ಲಿ ದೊಡ್ಡ ಪ್ರಮಾಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಕೈ ಹಿಡಿದಿದ್ದಾರೆ. ಲಿಂಗಾಯತರಿಗೆ ಸೂಕ್ತ ನ್ಯಾಯ ಒದಗಿಸುವಂತೆ ಹೈಕಮಾಂಡ್ಗೆ ಮನವರಿಕೆ ಮಾಡಿದ್ದೇವೆ ಎಂದು ಎಂ.ಬಿ ಪಾಟೀಲ್ ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಕೇವಲ ಲಿಂಗಾಯತರಲ್ಲ. ಎಲ್ಲಾ ಧರ್ಮದವರು ಬೆಂಬಲ ನೀಡಿದ್ದಾರೆ. ಪರಿಶಿಷ್ಟ ಜಾತಿ, ವಾಲ್ಮೀಕಿ ಸಮಾಜ, ಮುಸ್ಲಿಂರು ಸಹ ಬೆಂಬಲಿಸಿದ್ದ ಅಪಪ್ರಚಾರದಿಂದ ದೂರ ಇದ್ದತಂಹ ಲಿಂಗಾಯತರು ಈ ಬಾರಿ ದೊಡ್ಡ ಪ್ರಮಾಣದಲ್ಲಿ ಕಾಂಗ್ರೆಸ್ ಕೈ ಹಿಡಿದ್ದಾರೆ ಎಂದು ಹೇಳಿದ್ದಾರೆ.