Monday, December 23, 2024

ನಾಳೆಯಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆರಂಭ

ಬೆಂಗಳೂರು : ನಾಳೆಯಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ಆರಂಭವಾಗಲಿದ್ದು, ಜೂನ್ 3ರವರೆಗೆ ಪರೀಕ್ಷೆಗಳು ನಡೆಯಲಿವೆ.

2022-23ನೇ ಸಾಲಿನಲ್ಲಿ ಹಾಜರಾತಿ ಕೊರತೆಯಿಂದ ಪರೀಕ್ಷೆಗೆ ಹಾಜರಾಗದ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ.

ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ತೋರಿಸಿ ಬಸ್​(ಸರ್ಕಾರಿ ಬಸ್)ಗಳಲ್ಲಿ ಉಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ಪ್ರಯಾಣಿಸಬಹುದಾಗಿದೆ.

ಪೂರಕ ಪರೀಕ್ಷೆ ವೇಳಾಪಟ್ಟಿ

ಮೇ 23(ಮಂಗಳವಾರ) : ಕನ್ನಡ, ಅರೇಬಿಕ್

ಮೇ 24(ಬುಧವಾರ) : ಐಚ್ಛಿಕ ಕನ್ನಡ, ರಾಸಾಯನಶಾಸ್ತ್ರ, ಮೂಲ ಗಣಿತ

ಮೇ 25(ಗುರುವಾರ) : ಇಂಗ್ಲೀಷ್

ಮೇ 26(ಶುಕ್ರವಾರ) : ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ

ಮೇ 27(ಶನಿವಾರ) : ಇತಿಹಾಸ, ಸಂಖ್ಯಾಶಾಸ್ತ್ರ

ಮೇ 29(ಸೋಮವಾರ) : ಹಿಂದಿ

ಮೇ 30(ಮಂಗಳವಾರ) : ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ

ಮೇ 31(ಬುಧವಾರ) : ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ

ಜೂನ್ 1(ಗುರುವಾರ) : ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ

ಜೂನ್ 2(ಶುಕ್ರವಾರ) : ತರ್ಕ ಶಾಸ್ತ್ರ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ

ಜೂನ್ 3(ಶನಿವಾರ) : ಅರ್ಥಶಾಸ್ತ್ರ, ಜೀವಶಾಸ್ತ್ರ

RELATED ARTICLES

Related Articles

TRENDING ARTICLES