Wednesday, January 22, 2025

ಅಲ್ಲೋಲ.. ಕಲ್ಲೋಲ.. ‘5 ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ’

ಬೆಂಗಳೂರು : ಸಿದ್ದರಾಮಯ್ಯ ಅವರೇ 5 ವರ್ಷ ಪೂರ್ಣಾವಧಿ ಮುಖ್ಯಮಂತ್ರಿ ಆಗಿರಲಿದ್ದಾರೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಆ ಮೂಲಕ ಎರಡನೇ ಅವಧಿಗೆ ಸಿಎಂ ಆಗುವ ಕನಸು ಕಂಡಿದ್ದ ಕನಕಪುರ ಬಂಡೆಗೆ ಬಿಗ್ ಶಾಕ್ ಕೊಟ್ಟಿದ್ದಾರೆ.

ಮೈಸೂರು ಜಿಲ್ಲೆ ಸುತ್ತೂರು ಮಠದಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಬಳಿಕ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಈ ಬಗ್ಗೆ ಎಐಸಿಸಿ ಮಟ್ಟದಲ್ಲಿ ಯಾವುದೇ ಮಾತುಕತೆ ನಡೆದಿಲ್ಲ ಎಂದು ತಿಳಿಸಿದ್ದಾರೆ.

ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗಿರಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಸ್ಪಷ್ಟಪಡಿಸಿದ್ದಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆಯ ಕುರಿತು, ಸಿಎಂ ಬದಲಾವಣೆ ಬಗ್ಗೆ ಎಐಸಿಸಿ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ಎಂಬಿಪಿ ಹೇಳಿದ್ದಾರೆ. ಈ ಮೂಲಕ ಪರೋಕ್ಷವಾಗಿ ಡಿಕೆಶಿಗೆ ಟಕ್ಕರ್ ಕೊಟ್ಟಿದ್ದಾರೆ.

ಇದನ್ನೂ ಓದಿ : ಇನ್ಮೇಲೆ ‘ಕೆಂಪಣ್ಣ 40% ಕಮ್ಮಿಗೆ ಟೆಂಡರ್’ ಹಾಕುವಂತೆ ಹೇಳಬೇಕು : ಬೊಮ್ಮಾಯಿ

ಎಲ್ಲಾ ಹಗರಣಗಳಬಗ್ಗೆ ತನಿಖೆ

ಬಿಜೆಪಿ ಅಧಿಕಾರವದಿಯಲ್ಲಿ ನಡೆದ ಎಲ್ಲಾ ಹಗರಣಗಳಬಗ್ಗೆ ತನಿಖೆ ನಡೆಸುತ್ತೇವೆ. ಪಿಎಸ್ಐ ಹಗರಣ, ಆರೋಗ್ಯ ಇಲಾಖೆ, ನೀರಾವರಿ ಇಲಾಖೆ ಹಾಗೂ ಇತರೆ ಇಲಾಖೆ ಬಗ್ಗೆ ತನಿಖೆ ನಡೆಸುತ್ತೇವೆ. ಎಲ್ಲಾ ಹಗರಣಗನ್ನು ಲಾಜಿಕ್ ಎಂಡ್ ಗೆ ತೆಗೆದುಕೊಂಡು ಹೋಗುತ್ತೇವೆ. ತಪ್ಪಿಸ್ತರಿಗೆ ಶಿಕ್ಷೆ ಕೊಡಿಸುತ್ತೇವೆ, ನೊಂದ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸುತ್ತೇವೆ ಎಂದು ಹೇಳಿದ್ದಾರೆ.

ಉಚಿತ ಗ್ಯಾರಂಟಿ ಕಾರ್ಡ್ ವಿಚಾರವಾಗಿ ಮಾತನಾಡಿದ ಎಂಬಿಪಿ, ಮೊದಲ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಚರ್ಚೆ ಆಗಿದೆ. ಐದೂ ಗ್ಯಾರಂಟಿ ಜಾರಿಗೆ ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಈ ವಿಚಾರದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಧರ್ಮ-ಜ್ಞಾನಗಳ ಸಂಗಮವಾದ ಸುತ್ತೂರು ಶ್ರೀಮಠಕ್ಕೆ ಪತ್ನಿ ಜೊತೆಗೆ ಭೇಟಿ ನೀಡಿದ್ದೇನೆ. ದೇವರ ದರ್ಶನ ಪಡೆದು, ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳ ಅವರ ಆಶೀರ್ವಾದ ಪಡೆದುಕೊಂಡಿದ್ದೇನೆ. ಸಚಿವನಾಗಿ ಭವಿಷ್ಯದಲ್ಲಿ ಕೈಗೊಳ್ಳಬಹುದಾದ ಕಾರ್ಯಕ್ರಮಗಳ ಕುರಿತು ಶ್ರೀಗಳ ಸಲಹೆ, ಮಾರ್ಗದರ್ಶನ ಪಡೆದುಕೊಂಡೆ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES