Sunday, January 19, 2025

ಬಿಜೆಪಿ ಸರ್ಕಾರದ ‘ಎಲ್ಲಾ ಕಾಮಗಾರಿ ರದ್ದು’ಗೊಳಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈ ಹಿಂದಿನ ಬಿಜೆಪಿ ಸರ್ಕಾರ ಕೈಗೊಂಡಿದ್ದ ಎಲ್ಲಾ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗೆ ತಡೆ ನೀಡಿ ಆದೇಶ ಹೊರಡಿಸಿದೆ.

ಇಲಾಖೆಗಳ ಅಧೀನಕ್ಕೊಳಪಡುವ ನಿಗಮ ಮಂಡಳಿ, ಪ್ರಾಧಿಕಾರಗಳ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಹಣ ಬಿಡುಗಡೆ, ಪಾವತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆ ಹಿಡಿಯಲು ಸೂಚಿಸಲಾಗಿದೆ.

ರಾಜ್ಯ ಸರ್ಕಾರದ ಈ ನಿರ್ಧಾರದಿಂದ ಹಲವು ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳು ರದ್ದಾಗಿವೆ. ಈ ಹಿಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ನೇತೃತ್ವದ ಸರ್ಕಾರ ಸಹ ಇದೇ ರೀತಿ ಮಾಡಿತ್ತು. ಇದೀಗ, ಸಿದ್ದರಾಮಯ್ಯ ನೇತೃತ್ವದ ಸರ್ಕಾರವೂ ಅದೇ ಅಸ್ತ್ರ ಪ್ರಯೋಗ ಮಾಡಿದೆ.

ಇದನ್ನೂ ಓದಿ : ಇದು ‘ತುಘಲಕ್ ಸರ್ಕಾರದ ಢೋಂಗಿ ನೀತಿ’ : ಬಿಜೆಪಿ ಲೇವಡಿ

ನಿಗಮ, ಮಂಡಳಿ ಅಧ್ಯಕ್ಷರ ಅವಧಿ ರದ್ದು

ಇನ್ನೂ ನಿಗಮ, ಮಂಡಳಿ ಅಧ್ಯಕ್ಷರ ಅವಧಿ ರದ್ದುಗೊಳಿಸಲಾಗಿದೆ. ಎಲ್ಲಾ ಅಧ್ಯಕ್ಷರು, ನಿರ್ದೇಶಕರ ನೇಮಕ ರದ್ದುಗೊಳಿಸಿ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ನಿಗಮ ಮಂಡಳಿ ಅನುದಾನ, ಪಾವತಿಗೆ ತಡೆಹಿಡಿಯುವಂತೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಶೀಘ್ರದಲ್ಲಿಯೇ ರಾಜ್ಯ ಸರ್ಕಾರ ಹೊಸದಾಗಿ ನಿಗಮ ಮಂಡಳಿ ಅಧ್ಯಕ್ಷರ ನೇಮಕ ಮಾಡಲಾಗುತ್ತದೆ.

RELATED ARTICLES

Related Articles

TRENDING ARTICLES