Monday, December 23, 2024

ಪಿಯುಸಿ ಪೂರಕ ಪರೀಕ್ಷೆಗೆ ಕ್ಷಣಗಣನೆ, ಪರೀಕ್ಷಾರ್ಥಿಗಳಿಗೆ ಬಸ್ ನಲ್ಲಿ ಉಚಿತ ಪ್ರಯಾಣ

ಬೆಂಗಳೂರು: ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ಆರಂಭವಾಗಲಿವೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ.

2022-23ನೇ ಸಾಲಿನಲ್ಲಿ ಹಾಜರಾತಿ ಕೊರತೆಯಿಂದ ಪರೀಕ್ಷೆಗೆ ಹಾಜರಾಗದ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಜೂನ್ 3ರವರೆಪಿಯುಸಿ ಪೂರಕ ಪರೀಕ್ಷೆಗೆ ಕ್ಷಣಗಣನೆ, ಪರೀಕ್ಷಾರ್ಥಿಗಳಿಗೆ ಬಸ್ ನಲ್ಲಿ ಉಚಿತ ಪ್ರಯಾಣ
ಗೆ ಪೂರಕ ಪರೀಕ್ಷೆಗಳು ನಡೆಯಲಿವೆ.

ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ತೋರಿಸಿ ಬಸ್(ಸರ್ಕಾರಿ ಬಸ್)ಗಳಲ್ಲಿ ಉಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ಪ್ರಯಾಣಿಸಬಹುದಾಗಿದೆ.

ಪೂರಕ ಪರೀಕ್ಷೆ ವೇಳಾಪಟ್ಟಿ

ಮೇ 23(ಮಂಗಳವಾರ) : ಕನ್ನಡ, ಅರೇಬಿಕ್
ಮೇ 24(ಬುಧವಾರ) : ಐಚ್ಛಿಕ ಕನ್ನಡ, ರಾಸಾಯನಶಾಸ್ತ್ರ, ಮೂಲ ಗಣಿತ
ಮೇ 25(ಗುರುವಾರ) : ಇಂಗ್ಲೀಷ್
ಮೇ 26(ಶುಕ್ರವಾರ) : ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮೇ 27(ಶನಿವಾರ) : ಇತಿಹಾಸ, ಸಂಖ್ಯಾಶಾಸ್ತ್ರ
ಮೇ 29(ಸೋಮವಾರ) : ಹಿಂದಿ
ಮೇ 30(ಮಂಗಳವಾರ) : ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ
ಮೇ 31(ಬುಧವಾರ) : ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ
ಜೂನ್ 1(ಗುರುವಾರ) : ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ
ಜೂನ್ 2(ಶುಕ್ರವಾರ) : ತರ್ಕ ಶಾಸ್ತ್ರ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ
ಜೂನ್ 3(ಶನಿವಾರ) : ಅರ್ಥಶಾಸ್ತ್ರ, ಜೀವಶಾಸ್ತ್ರ

RELATED ARTICLES

Related Articles

TRENDING ARTICLES