Sunday, May 5, 2024

‘ಪೊಲೀಸ್ ಇಲಾಖೆಯನ್ನು ಕೇಸರಿಕರಣ’ ಮಾಡಲು ಹೊರಟಿದ್ದೀರಾ? : ಡಿಕೆಶಿ ಫುಲ್ ಗರಂ

ಬೆಂಗಳೂರು : ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ಹೊರಟಿದ್ದೀರಾ ನೀವು? ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪೊಲೀಸ್ ಅಧಿಕಾರಿಗಳ ವಿರುದ್ಧ ಕೆರಳಿ ಕೆಂಡವಾಗಿದ್ದಾರೆ.

ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಸರ್ಕಾರಿ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಂಗತಲೂ ಮೊದಲೇ ಡಿ.ಕೆ ಶಿವಕುಮಾರ್ ಮೊಲದು ಮಾತನಾಡಿದ್ದಾರೆ. ತಮ್ಮದೇ ಆದ ಮಾತಿನ ಶೈಲಿಯಲ್ಲೇ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಎಚ್ಚರಿಸಿದ್ದಾರೆ.

ಬಿಜೆಪಿ ಸರ್ಕಾರ ಹೋಗಿದೆ, ಇವಾಗ ಇರೋದು ನಮ್ಮ ಸರ್ಕಾರ. ಇಷ್ಟು ದಿನ ಬಿಜೆಪಿ ಪರವಾಗಿ ಕೆಲಸ ಮಾಡಿದ್ದು ಸಾಕು. ಇನ್ಮುಂದೆ ಎಚ್ಚರಿಕೆಯಿಂದ ಕೆಲಸ ಮಾಡಿ ಎಂದು ಪೊಲೀಸರಿಗೆ ಖಡಕ್ ಸೂಚನೆ ರವಾನಿಸಿದ್ದಾರೆ.

ನಾವು ಇದಕ್ಕೆ ಅವಕಾಶ ಕೊಡೊಲ್ಲ

ಸಭೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡ ಡಿ.ಕೆ ಶಿವಕುಮಾರ್, ನಾಲ್ಕು ವರ್ಷ ಬಿಜೆಪಿ ಅಧಿಕಾರದಲ್ಲಿ ಏನು ಮಾಡಿದ್ರಿ ಅಂತ ಗೊತ್ತಿದೆ. ಆ ತಪ್ಪುಗಳು ಮರುಕಳಿಸಬಾರದು. ಪೊಲೀಸ್ ಇಲಾಖೆಯನ್ನ ಕೇಸರಿಕರಣ ಮಾಡಲು ಹೊರಟಿದ್ದೀರಾ ನೀವು? ನಮ್ಮ ಸರ್ಕಾರದಲ್ಲಿ ಇದಕ್ಕೆ ಅವಕಾಶ ಕೊಡೊಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : ಕಲಬುರಗಿ ಎಸ್ಪಿ, ಕಮಿಷನರ್ ಗೆ ಪ್ರಿಯಾಂಕ್ ಖರ್ಗೆ ಕಾನೂನು ಪಾಠ

ಸಭೆಗೂ ಕೇಸರಿ ಶಾಲು ಹಾಕ್ಕೊಂಡು ಬರಬೇಕಿತ್ತು

ಮಂಗಳೂರಿನಲ್ಲಿ ಪೊಲೀಸರೇ ಕೇಸರಿ ಶಾಲು ಹಾಕ್ತೀರಾ ಅಂದರೆ ಹೇಗೆ? ಈ‌ ಸಭೆಗೂ ಕೇಸರಿ ಶಾಲು ಹಾಕಿಕೊಂಡು ಬರಬೇಕಾಗಿತ್ತು. ನಮ್ಮ ಸರಕಾರದಲ್ಲಿ ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ನಾವು ಬಿಡೋದಿಲ್ಲ. ಪಿಎಸ್ಐ(PSI) ಅಕ್ರಮದಲ್ಲಿ ಒಬ್ಬ ಎಡಿಜಿಪಿ ಪೇಪರ್ ತಿದ್ದುತ್ತಾರೆ ಅಂದರೆ ಇಲಾಖೆ ಎಷ್ಟು ಕೆಟ್ಟು ಹೋಗಿದೆ. ಪೊಲೀಸ್ ಇಲಾಖೆ ಘನತೆಯನ್ನ  ಹಾಳು‌ ಮಾಡಿದ್ದೀರ ನೀವು. ಇದನ್ನು ನಾವು ಸಹಿಸುವುದಿಲ್ಲ ಎಂದು ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.

ಯಾರು ನಮಗೆ ಹಣ ಕೊಡೋದು ಬೇಡ

ನಮ್ಮ ಸರ್ಕಾರದಲ್ಲಿ ಎಲ್ಲವೂ ಕ್ಲೀನ್ ಆಗಬೇಕು. ಜನ ದೊಡ್ಡ ಬದಲಾವಣೆ ನಿರೀಕ್ಷೆ ಮಾಡಿದ್ದಾರೆ. ಅದರಂತೆ ಪೊಲೀಸ್ ಇಲಾಖೆಯಲ್ಲಿ ಬದಲಾವಣೆ ಆಗಬೇಕು. ನೀವು ಯಾರು ನಮಗೆ ಹಣ ಕೊಡೋದು ಬೇಡ. ಉತ್ತಮವಾಗಿ ಕೆಲಸ ಮಾಡಿದ್ರೆ ಸಾಕು ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಖಡಕ್ ಸಂದೇಶ ರವಾನಿಸಿದ್ದಾರೆ.

RELATED ARTICLES

Related Articles

TRENDING ARTICLES