Wednesday, January 22, 2025

ಸಚಿವರಿಗೆ ಕೊಠಡಿ ಹಂಚಿಕೆ, ‘ಡಿಕೆಶಿ ಕೊಠಡಿ ಸಂಖ್ಯೆ’ ಯಾವುದು ಗೊತ್ತಾ?

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಉಪಮುಖ್ಯಮಂತ್ರಿ ಡಿಕೆಶಿ ಒಳಗೊಂಡಂತೆ ಮತ್ತೆ ಮೂವರಿಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿ ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ.

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ 335, 336, 337 ಮತ್ತು 337 ಎ, ಸಚಿವರಾದ ಡಾ ಜಿ.ಪರಮೇಶ್ವರ್ ಅವರಿಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ 327 ಮತ್ತು 327 ಎ ಹಾಗೂ ರಾಮಲಿಂಗಾರೆಡ್ಡಿ ಅವರಿಗೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ 329 ಮತ್ತು 329 ಎ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇದನ್ನೂ ಓದಿ : ಕನಕಪುರಕ್ಕೆ ನಾನೇ ಬರ್ತೀನಿ, ‘ನೀವ್ಯಾರೂ ಬೆಂಗಳೂರಿಗೆ ಬರಬೇಡಿ’ : ಡಿಕೆಶಿ ಮನವಿ

ಜಮೀರ್, ಜಾರ್ಜ್, ಎಂಬಿಪಿಗೂ ಕೊಠಡಿ

ಇನ್ನೂ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಸಹೋದ್ಯೋಗಿಗಳಲ್ಲಿ ಮೂವರು ಸಚಿವರಿಗೆ ವಿಧಾನಸೌಧ ಹಾಗೂ ವಿಕಾಸಸೌಧದಲ್ಲಿ ಕೊಠಡಿಗಳನ್ನು ಹಂಚಿಕೆ ಮಾಡಲಾಗಿತ್ತು.

ಕೆ.ಜೆ ಜಾರ್ಜ್ ಅವರಿಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ 317 ಮತ್ತು 317 ಎ, ಎಂ.ಬಿ ಪಾಟೀಲ್ ಅವರಿಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ 344 ಮತ್ತು 344 ಎ ಹಾಗೂ ಬಿ.ಝಡ್ ಜಮೀರ್ ಅಹಮದ್ ಖಾನ್ ಅವರಿಗೆ ವಿಕಾಸಸೌಧದ ಮೊದಲನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ 143 ಮತ್ತು 146 ಹಂಚಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

RELATED ARTICLES

Related Articles

TRENDING ARTICLES