Monday, December 23, 2024

ಕನಕಪುರಕ್ಕೆ ನಾನೇ ಬರ್ತೀನಿ, ‘ನೀವ್ಯಾರೂ ಬೆಂಗಳೂರಿಗೆ ಬರಬೇಡಿ’ : ಡಿಕೆಶಿ ಮನವಿ

ಬೆಂಗಳೂರು : ಕನಕಪುರಕ್ಕೆ ನಾನೇ ಬರುವೆ, ನೀವ್ಯಾರೂ ಬೆಂಗಳೂರಿಗೆ ಬರುವ ತೊಂದರೆ ತಗೋಬೇಡಿ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಡಿಸಿಎಂ ಡಿಕೆಶಿ, ನಾನೇ ಕನಕಪುರಕ್ಕೆ ಬಂದು ನಿಮಗೆ ಕೃತಜ್ಞತೆ ಸಲ್ಲಿಸಿ, ಅಭಿನಂದನೆ ಸ್ವೀಕರಿಸುವೆ. ನೀವ್ಯಾರೂ ಬೆಂಗಳೂರಿಗೆ ಬರುವ ತೊಂದರೆ ತೆಗೆದುಕೊಳ್ಳುವುದು ಬೇಡ ಎಂದು ಕನಕಪುರ ಕ್ಷೇತ್ರದ ಅಭಿಮಾನಿಗಳು, ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಗೆ ಅವರು ಮನವಿ ಮಾಡಿದ್ದಾರೆ.

ದೆಹಲಿ ಪ್ರವಾಸದ ನಂತರ ನಾನೇ ಖುದ್ದಾಗಿ ಕನಕಪುರಕ್ಕೆ ಬರುತ್ತೇನೆ. ಕ್ಷೇತ್ರದ ಜನರಿಗೆ ತೊಂದರೆ ಆಗುವುದು ಬೇಡ ಎಂಬ ಕಾಳಜಿಯಿಂದ ಈ ಮನವಿ ಮಾಡುತಿದ್ದೇನೆ. ಯಾರೂ ಅನ್ಯತಾ ಭಾವಿಸುವುದು ಬೇಡ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : 5 ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ

ಡಿಕೆಶಿ ಸಿಎಂ ಆಗಲು ಸಿದ್ದು ಬಿಡಲ್ಲ

ಡಿ.ಕೆ ಶಿವಕುಮಾರ್ ಅವರು ಸಿಎಂ ಆಗುವುದು ಇಲ್ಲ, ಅವರನ್ನು ಆಗಲು ಸಿದ್ದರಾಮಯ್ಯನವರು ಬಿಡುವುದು ಇಲ್ಲ ಎಂದು ರಾಜ್ಯ ಬಿಜೆಪಿ ಡಿಕೆಶಿಗೆ ಟಾಂಗ್ ಕೊಟ್ಟಿದೆ.

ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಎಂ.ಬಿ ಪಾಟೀಲ್ ಅವರು ಈ ಹೇಳಿಕೆಯ ಮೂಲಕ ಡಿ.ಕೆ. ಶಿವಕುಮಾರ್ ಅವರಿಗೆ ನೇರವಾದ ಎಚ್ಚರಿಕೆಯನ್ನು ರವಾನಿಸಿದಾರಷ್ಟೇ. ಅದೇನೆ ಇದ್ದರೂ ಬಹುಮತ ದೊರಕಿದ ನಂತರದ ಈವರೆಗಿನ ಎಲ್ಲ ಬೆಳವಣಿಗೆಗಳನ್ನು ಗಮನಿಸಿದಾಗ, ಈ ಸರಕಾರ ಸುಸ್ತಿರವಾಗಿರಲಿದೆ ಎಂಬ ಯಾವ ಲಕ್ಷಣವೂ ಕಾಣುತ್ತಿಲ್ಲ, ಗ್ಯಾರಂಟಿಯೂ ಇಲ್ಲ ಎಂದು ಹೇಳಿದೆ.

ದೆಹಲಿಯ ತಮ್ಮ ಹೈಕಮಾಂಡಿಗೆ ಕಪ್ಪ ಪೂರೈಸಬೇಕಾದ ಏಕೈಕ ಮಾನದಂಡದಲ್ಲಿ ಈ ಎಟಿಎಂ ಸರ್ಕಾರ (#ATMSarkara) ರಚನೆಯಾಗಿರುವುದು ಮತ್ತು ಅದಷ್ಟೇ ಇದರ ಆದ್ಯತೆಯಾಗಿರುವುದು ರಾಜ್ಯದ ದುರಂತ ಎಂದು ಬಿಜೆಪಿ ಲೇವಡಿ ಮಾಡಿದೆ.

RELATED ARTICLES

Related Articles

TRENDING ARTICLES