ಬೆಂಗಳೂರು : ಡಿಜಿ ಮತ್ತು ಐಜಿ ಬದಲಾವಣೆ ಬಳಿಕ ಈಗ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಸರದಿ ಬಂದಿದೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಯಾರಾಗ್ತಾರೆ ಎಂಬ ಪ್ರಶ್ನೆ ಎದ್ದಿದೆ.
ಹಾಲಿ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಜಾಗಕ್ಕೆ ಯಾರು ಬರಬಹುದು ಎಂಬ ಪ್ರಶ್ನೆ ಎದುರಾಗಿದೆ. ಸದ್ಯ ಐದು ಜನರ ಹೆಸರುಗಳು ಕೇಳಿ ಬರ್ತಾ ಇದ್ದು, ಪೊಲೀಸ್ ಕಮಿಷನರ್ ಯಾರಾಗ್ತಾರೆ ಎಂಬ ಚರ್ಚೆ ಜೋರಾಗಿದೆ.
ಪ್ರತಾಪ್ ರೆಡ್ಡಿ ಸ್ಥಾನಕ್ಕೆ ಸ್ಪೆಷಲ್ ಟ್ರಾಫಿಕ್ ಕಮಿಷನರ್ ಮಹಮ್ಮದ್ ಸಲೀಂ, ಇಂಟಲಿಜೆನ್ಸ್ ವಿಭಾಗದ ಎಡಿಜಿಪಿ ದಯಾನಂದ್, ಉಮೇಶ್ ಕುಮಾರ್, ಸೀಮಂತ್ ಕುಮಾರ್ ಸಿಂಗ್ ಹಾಗೂ ಅಲೋಕ್ ಕುಮಾರ್ ಹೆಸರುಗಳು ಚಾಲ್ತಿಯಲ್ಲಿವೆ. ಸದ್ಯ ಮಹಮ್ಮದ್ ಸಲೀಂ ಹಾಗೂ ದಯಾನಂದ್ ನಡುವೆ ತೀವ್ರ ಪೈಪೋಟಿ ಇದೆ. ಮೂಲಗಳ ಪ್ರಕಾರ ಸಲೀಂ ಕಮೀಷನರ್ ಆಗುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ : ನೂತನ ಡಿಜಿಪಿಯಾಗಿ ಅಲೋಕ್ ಮೋಹನ್ ಅಧಿಕಾರ ಸ್ವೀಕಾರ
7 ಮಂದಿ ಬೈಕ್ ಕಳ್ಳರ ಬಂಧನ
ಬೆಂಗಳೂರಿನಲ್ಲಿ ಮನೆ ಮುಂದೆ ನಿಲ್ಲಿಸಿರುವ ಬೈಕ್ಗಳನ್ನು ಕದಿಯುತ್ತಿದ್ದ ಖತರ್ನಾಕ್ ಕಳ್ಳರನ್ನು ಬೊಮ್ಮನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಒಟ್ಟು 7 ಜನ ಆರೋಪಿಗಳನ್ನ ಬಂಧಿಸಿದ್ದು, 72 ಬೈಕ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳು ತಮಿಳುನಾಡು ಮೂಲದವರಾಗಿದ್ದು, ಬೆಂಗಳೂರಲ್ಲಿ ಬೈಕ್ಗಳನ್ನು ಕದ್ದು ತಮಿಳುನಾಡಿನಲ್ಲಿ ಮಾರಾಟ ಮಾಡುತ್ತಿದ್ದರು. 2 ಲಕ್ಷ ಮೌಲ್ಯದ ಬೈಕ್ಗಳನ್ನು ಕೇವಲ 25 ಸಾವಿರಕ್ಕೆ ಮಾರಾಟ ಮಾಡುತ್ತಿದ್ದರು. ತಮಿಳುನಾಡಿನ ವಾನಂಬಾಡಿ, ಹುಡುಗತ್ತೂರು, ಅಳಂಗಾಯಂ, ಜಮುನಾ ಮತ್ತೂರುರಿನಲ್ಲಿ ಮಾರಾಟ ಮಾಡುತ್ತಿದ್ದರು.