Friday, May 10, 2024

Karnataka Rains: ಬೆಂಗಳೂರು ಸೇರಿ ರಾಜ್ಯದಲ್ಲಿ 4 ದಿನ ಭಾರಿ ಮಳೆ ; ಯಾವ್ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​..?

ಬೆಂಗಳೂರು: ರಾಜ್ಯದ ವಿವಿಧೆಡೆ 4 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಹೌದು, ನಿನ್ನೆ ರಾಜ್ಯದಲ್ಲಿ ಹಲವೆಡೆ ಭಾರೀ ಮಳೆಯಾಗಿರುವುದರಿಂದ ಬೆಂಗಳೂರು ಸೇರಿ 5 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ ಮಾಡಿದ್ದಾರೆ.

ಎಲ್ಲೆಲ್ಲೆ ಮಳೆ..? 

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇನ್ನುಳಿದಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ಎಷ್ಟು ದಿನ ಮಳೆ ಮುನ್ಸೂಚನೆ..? 

ಮೇ 27ರವರೆಗೆ ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಎಚ್​ಎಎಲ್​ನಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 33.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

RELATED ARTICLES

Related Articles

TRENDING ARTICLES