Friday, November 22, 2024

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಎಂ ಇಬ್ರಾಹಿಂ ರಾಜೀನಾಮೆ

ಬೆಂಗಳೂರು : ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಎಂ ಇಬ್ರಾಹಿಂ ರಾಜೀನಾಮೆ ಸಲ್ಲಿಸಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣಾ ಸೋಲಿನ ಹೊಣೆ ಹೊತ್ತು ಸಿಎಂ ಇಬ್ರಾಹಿಂ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ನಾಳೆ‌ ಜೆಡಿಎಸ್ ಪಕ್ಷದ ಆತ್ಮಾವಲೋಕನ ಸಭೆ ನಡೆಯಲಿದೆ. ಈ ಹಿನ್ನೆಲೆ ಸಭೆಗೂ ಮೊದಲೇ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ. ಆತ್ಮಾವಲೋಕನ ಸಭೆಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಇಬ್ರಾಹಿಂ ಅವರು, ಇವತ್ತು ದೇವೆಗೌಡ್ರು ಹಿರಿಯರು, ಮುಖಂಡರು ಎಲ್ಲರನ್ನು ಕರೆದಿದ್ದಾರೆ. ಫಲಿತಾಂಶ ಬಂದ ಮಾರನೆ ದಿನ ಸೋಲಿನ ನೈತಿಕ ಹೊಣೆ ಹೊತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ‌ ಸಲ್ಲಿಸಿದ್ದೇನೆ. ಹೊಸ ಸರ್ಕಾರ ರಚನೆಯಾಗಿದೆ ಶುಭವಾಗಲಿ ಎಂದಿದ್ದಾರೆ.

ಇದನ್ನೂ ಓದಿ : ‘ಬಿಜೆಪಿಯವ್ರು 40%, ಕಾಂಗ್ರೆಸ್ 20% : ಸಿಎಂ ಇಬ್ರಾಹಿಂ

ಖಾದರ್ ಎದ್ದೇಳಂಗು ಇಲ್ಲ, ಮಾತಾಡಂಗು ಇಲ್ಲ

ಕಾಂಗ್ರೆಸ್‌ ಪಕ್ಷದಲ್ಲಿದ್ರೆ ಮಂತ್ರಿಯಾಗುತ್ತಿದ್ರಿ ಎಂಬ ಸುದ್ದಿಗಾರರ ಪ್ರಶ್ನೆಗೆ, ಗೌರವ ಇಲ್ಲದ ಕಡೆ ಸ್ಥಾನಕ್ಕೆ ಹೋಗಲ್ಲ, ಮಾನಕ್ಕೆ ಹೋಗ್ತೀವಿ. ಯು.ಟಿ ಖಾದರ್‌ ಅವರನ್ನು ಡಿಸಿಎಂ ಮಾಡಬಹುದಿತ್ತಲ್ವಾ? ಈಗ ಅವರು ಎದ್ದೇಳಂಗು ಇಲ್ಲ, ಮಾತಾಡಂಗು ಇಲ್ಲ ಎಂದು ಯು‌.ಟಿ ಖಾದರ್ ಸ್ಪೀಕರ್ ಮಾಡಿದ ಕಾಂಗ್ರೆಸ್ ನಡೆಗೆ ಟೀಕೆ ಮಾಡಿದ್ದಾರೆ.

ಬಿಜೆಪಿ ವಿರೋಧಿ ಅಲೆ ಲಾಭ ಪಡೆಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಆದರೂ ನಾವು ರಾಜ್ಯದಲ್ಲಿ ೬೦ ಲಕ್ಷ ಮತ ಪಡೆದಿದ್ದೇವೆ. ಜಿಪಂ, ತಾಪಂ ಚುನಾವಣೆಗೆ ಸಜ್ಜಾಗಿ ಅಂತ ಕಾರ್ಯಕರ್ತರಿಗೆ ಹೇಳ್ತೀನಿ. ಈ ಸರ್ಕಾರದ ಮೂರು ತಿಂಗಳ ಹನಿಮೂನ್ ಪಿರ್ಯಾಡ್ ನೋಡ್ತೀವಿ. ನಮ್ಮಲ್ಲಿ ಮತ ಪರಿವರ್ತನೆಗಾಗಿ ಸಿದ್ದತೆ ಮಾಡಿಕೊಳ್ಳುವಲ್ಲಿ ವಿಫಲವಾಗಿದ್ದೇವೆ. ಕೊನೆಯ ನಾಲ್ಕು ದಿನದ ತಂತ್ರಗಾರಿಕೆಯಲ್ಲಿ ವಿಫಲವಾದೆವು ಎಂದು ಇಬ್ರಾಹಿಂ ಹೇಳಿದ್ದಾರೆ.

RELATED ARTICLES

Related Articles

TRENDING ARTICLES