Wednesday, January 22, 2025

ಕಾಂಗ್ರೆಸ್ ಅಂದ್ರೆ ಗೂಂಡಾಗಿರಿ, ಗೂಂಡಾಗಿರಿ ಅಂದ್ರೆ ಕಾಂಗ್ರೆಸ್ : ಆರ್ ಅಶೋಕ್

ಬೆಂಗಳೂರು : ಕಾಂಗ್ರೆಸ್ ಅಂದ್ರೆ ಗೂಂಡಾಗಿರಿ, ಗೂಂಡಾಗಿರಿ ಅಂದ್ರೆ ಕಾಂಗ್ರೆಸ್ ಎಂದು ಮಾಜಿ ಸಚಿವ ಆರ್. ಅಶೋಕ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ನಡೆಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಮೊದಲ ಸಭೆಯಲ್ಲಿ ಡಿಕೆಶಿ ಪೊಲೀಸ್ ಅಧಿಕಾರಿಗಳಿಗೆ ಧಮ್ಕಿ ಹಾಕಿದ್ದಾರೆ. ಕಾಂಗ್ರೆಸ್ ಅಂದ್ರೆ ಗೂಂಡಾಗಿರಿ, ಗೂಂಡಾಗಿರಿ ಅಂದ್ರೆ. ಪ್ರತಿ ಸರ್ಕಾರ ಬಂದಾಗಲೂ ಅದೇ ಅಧಿಕಾರಿಗಳು ಇರ್ತಾರೆ. ಆದ್ರೆ ಧಮ್ಕಿ ಹಾಕೋ ಸಂಸ್ಕೃತಿ ಒಳ್ಳೆಯದಲ್ಲ ಎಂದು ಆರ್. ಅಶೋಕ್ ಛೇಡಿಸಿದ್ದಾರೆ.

ಜೂನ್ 1 ರಂದು ಐದು ಉಚಿತ ಗ್ಯಾರಂಟಿ ಕೊಡ್ತೀವಿವಿ ಅಂತ ಹೇಳಿದ್ದಾರೆ. ಆದ್ರೆ ಇನ್ನೂ ಯಾವುದೇ ಪ್ರಕಟಣೆಗಳನ್ನು ನೀವು ನೀಡಿಲ್ಲ. ಗ್ಯಾರಂಟಿಗಳ ಬಗ್ಗೆ ಯಾವುದೇ ಘೊಷಣೆ ಮಾಡಿಲ್ಲ. ಮೊದಲ ಕ್ಯಾಬಿನೆಟ್‌ನಲ್ಲಿ ಅಡ್ಡಗೋಡೆ ಮೇಲೆ ದೀಪ‌ ಇಟ್ಟಿದ್ದೀರಿ. ಆದ್ರೆ ಗ್ಯಾರಂಟಿಗಳ ಬಗ್ಗೆ ಮಾತನಾಡೋ ಬದಲು ಅಧಿಕಾರಿಗಳಿಗೆ ಧಮ್ಕಿ ಹಾಕುತ್ತಿದ್ದೀರಿ. ಇದನ್ನ ಡೈವರ್ಟ್ ಮಾಡಲು ಅಧಿಕಾರಿಗಳಿಗೆ ಧಮ್ಕಿ ಹಾಕಿದ್ದಾರೆ ಎಂದು ಡಿಕೆಶಿಗೆ ಟಕ್ಕರ್ ಕೊಟ್ಟಿದ್ದಾರೆ.

ಇದನ್ನೂ ಓದಿ : ಮತ್ತೆ ‘ಹಾವೇರಿ ಗೋಲಿಬಾರ್’ ರೀತಿಯ ಘಟನೆ ರಿಪೀಟ್ ಆಗಬಾರದು : ಸಿದ್ದರಾಮಯ್ಯ

ಇದುಶಿವರಾಮಯ್ಯ ಸಮ್ಮಿಶ್ರ ಸರ್ಕಾರ

ಇದು ಕಾಂಗ್ರೆಸ್ ಸರ್ಕಾರ ಅಲ್ಲ. ಇದು ಡಿಕೆಶಿ ಹಾಗೂ ಸಿದ್ದರಾಮಯ್ಯನವರ ಸಮ್ಮಿಶ್ರ ಸರ್ಕಾರ. ನಾನು ಉಪಮುಖ್ಯಮಂತ್ರಿ ಆಗಿ ಕೆಲಸ ಮಾಡಿದ್ದೇನೆ. ಮುಖ್ಯಮಂತ್ರಿ ಆಗಿದ್ದಾಗ ಯಾರು ಮಾತನಾಡಲ್ಲ. ಆದರೆ, ಸಿದ್ದರಾಮಯ್ಯ ಮಾತನಾಡುವುದಕ್ಕೂ ಮೊದಲು ನಾನೇ ಮಾತನಾಡಬೇಕು ಎಂಬುದು ಡಿಕೆಶಿಗೆ ಚಾಳಿ ಆಗಿದೆ ಎಂದು ಡಿಕೆಶಿ ನಡೆಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ದೌರ್ಜನ್ಯ ಸಹಿಸಲ್ಲ

ಸಂವಿಧಾನಿಕವಾಗಿ ಉಪಮುಖ್ಯಮಂತ್ರಿ ಹುದ್ದೆ ಇಲ್ಲ. ಇದನ್ನ ಪಕ್ಷಗಳು ನಡೆಸಿಕೊಂಡು ಬಂದಿರುವ ಸಂಪ್ರದಾಯ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೌನಕ್ಕೆ ಶರಣಾಗಿದ್ದಾರೆ. ಅದ್ಯಾಕೆ ಮೌನವಾಗಿದ್ದಾರೋ ಗೊತ್ತಿಲ್ಲ. ರಾಜ್ಯದ ಜನತೆ ಕಾಂಗ್ರೆಸ್ ಸರ್ಕಾರದ ದೌರ್ಜನ್ಯ ಸಹಿಸೋದಿಲ್ಲ ಎಂದು ಆರ್. ಅಶೋಕ್ ಹೇಳಿದ್ದಾರೆ.

RELATED ARTICLES

Related Articles

TRENDING ARTICLES