Sunday, December 22, 2024

Karnataka Rains: ಭಾರೀ ಮಳೆ ಸಾಧ್ಯತೆ : ರಾಜ್ಯದ ಈ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೆಂಗಳೂರು : ರಾಜ್ಯದ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಒಳನಾಡಿನ ಕೆಲವು ಕಡೆ ಅಧಿಕ ಮಳೆಯಾಗಲಿದೆ. ಗಾಳಿಯ ವೇಗವು ಗಂಟೆಗೆ 40 ಕಿ.ಮೀ ರಿಂದ 50 ಕಿ.ಮೀ ಇರುವ ಸಾಧ್ಯತೆ ಇದೆ.

ಬಿರುಗಾಳಿ ಸಹಿತ ಗುಡುಗಿನಿಂದ ಕೂಡಿದ ಮಳೆಯಾಗಲಿದೆ. ಬೆಳ್ಳೂರು, ಮಂಚಿಕೆರೆ, ಕ್ಯಾಸಲ್ ರಾಕ್, ಅಣ್ಣಿಗೆರೆ, ಕುಂದಗೋಳ, ಕಿರವತ್ತಿ, ಅಂಕೋಲಾ, ಬೆಳಗಾವಿ ವಿಮಾನ ನಿಲ್ದಾಣ, ಹಿಡಕಲ್ ಅಣೆಕಟ್ಟು, ಹುಕ್ಕೇರಿ, ಸಕಲೇಶಪುರ, ಗೋಪಾಲ್​ನಗರ, ಬನವಾಸಿ, ಮದ್ದೂರು, ಉತ್ತರಹಳ್ಳಿ, ಹಳಿಯಾಳ, ಕುಮಟಾ, ಮಹಾಲಿಂಗಪುರ, ರಬಕವಿ, ಕೃಷ್ಣರಾಜಪೇಟೆ, ಶಿಡ್ಲಘಟ್ಟ, ನಿಪ್ಪಾಣಿ, ಚಿಕ್ಕಬಳ್ಳಾಪುರ, ಕುಣಿಗಲ್​ನಲ್ಲಿ ಮಳೆಯಾಗಿದೆ.

ವಿಜಯಪುರದಲ್ಲಿ 40.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು, ರಾತ್ರಿ ವೇಳೆಗೆ ಬಹಳಷ್ಟು ಮಳೆಯಾಗುವ ಸಾಧ್ಯತೆ ಇದೆ.

RELATED ARTICLES

Related Articles

TRENDING ARTICLES