Monday, May 13, 2024

ಟಾಸ್ ಗೆದ್ದ ಮುಂಬೈ ಬ್ಯಾಟಿಂಗ್, ಇಂದಿನ ಪಂದ್ಯದಲ್ಲಿ ಗೆಲ್ಲೋದ್ಯಾರು?

ಬೆಂಗಳೂರು : ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಚೆನ್ನೈನ ಎಂ.ಎ ಚಿದಂಬರಂ ಸ್ಟೇಡಿಯಂನಲ್ಲಿ ಎಲಿಮಿನೇಟರ್ ಪಂದ್ಯ ನಡೆಯುತ್ತಿದ್ದು, ಇಂದಿನ ಪಂದ್ಯದಲ್ಲಿ ಸೋಲುವ ತಂಡ ಐಪಿಎಲ್ ಟೂರ್ನಿಯಿಂದ ನಿರ್ಗಮಿಸಲಿದೆ. ಗೆದ್ದ ತಂಡ ಕ್ವಾಲಿಫೈಯರ್ 1ನೇ ಪಂದ್ಯದಲ್ಲಿ ಸೋತ ತಂಡದೊಂದಿಗೆ ಕ್ವಾಲಿಫೈಯರ್ 2ರಲ್ಲಿ ಸೆಣಸಲಿದೆ.

ಐಪಿಎಲ್ ನಲ್ಲಿ ಈವರೆಗೆ ಲಕ್ನೋ ಹಾಗೂ ಮುಂಬೈ ಮೂರು ಬಾರಿ ಮುಖಾಮುಖಿಯಾಗಿದ್ದು, ಮುಂಬೈ ಮೂರು ಬಾರಿಯೂ ಸೋತಿದೆ. ಹೀಗಾಗಿ, ಇಂದಿನ ಪಂದ್ಯ ಸಾಕಷ್ಟು ರೋಚಕತೆಯಿಂದ ಕೂಡಿರಲಿದೆ.

ಕನ್ನಡಿಗ ಕರುಣ್ಗಿಲ್ಲ ಅವಕಾಶ

ಲಕ್ನೋ ತಂಡ ನಾಯಕ ಕೆ.ಎಲ್ ರಾಹುಲ್ ಇಂಜುರಿಗೆ ಒಳಗಾಗಿ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ಮತ್ತೊಬ್ಬ ಕನ್ನಡಿಗ ಕರುಣ್ ನಾಯರ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಆದರೆ, ಈವರೆಗೂ ಕರುಣ್ ನಾಯರ್ ಅವರಿಗೆ ಲಕ್ನೋ ತಂಡ ಆಡುವ 11ರ ಬಳಗದಲ್ಲಿ ಸ್ಥಾನ ನೀಡಿಲ್ಲ. ಇನ್ನೂ, ತಂಡದಲ್ಲಿರುವ ಮತ್ತೊಬ್ಬ ಕನ್ನಡಿಗ ಕೃಷ್ಣಪ್ಪ ಗೌತಮ್ ಆಲ್ ರೌಂಡರ್ ಕೋಟದಲ್ಲಿ ಇಂದು ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ಮುಂಬೈ ಇಂಡಿಯನ್ಸ್ ತಂಡ

ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್(ವಿ.ಕೀ.), ಕ್ಯಾಮರೋನ್ ಗ್ರೀನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಟಿಮ್ ಡೇವಿಡ್, ಕ್ರಿಸ್ ಜೋರ್ಡಾನ್, ಹೃತಿಕ್ ಶೋಕೀನ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆಂಡಾರ್ಫ್, ಆಕಾಶ್ ಮಧ್ವಾಲ್

ಲಕ್ನೋ ಸೂಪರ್ ಜೈಂಟ್ಸ್ ತಂಡ

ಕೃನಾಲ್ ಪಾಂಡ್ಯ(ನಾಯಕ), ದೀಪಕ್ ಹೂಡಾ, ಪ್ರೇರಕ್ ಮಂಕಡ್, ಆಯುಷ್ ಬದೋನಿ, ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್ (ವಿ.ಕೀ.), ಕೃಷ್ಣಪ್ಪ ಗೌತಮ್, ರವಿ ಬಿಷ್ಣೋಯ್, ನವೀನ್ ಉಲ್ ಹಕ್, ಯಶ್ ಠಾಕೂರ್, ಮೊಹ್ಸಿನ್ ಖಾನ್

ಮೇ 28ರಂದು ಫೈನಲ್ ಪಂದ್ಯ

ಮೇ 26ರಂದು ಅಹಮದಾಬಾದ್ ನಲ್ಲಿ ಕ್ವಾಲಿಫೈಯರ್ 2 ಪಂದ್ಯ ನಡೆಯಲಿದೆ. ಎಲಿಮಿನೇಟರ್ ಗೆದ್ದವರ ವಿರುದ್ಧ ಕ್ವಾಲಿಫೈಯರ್ 1 ಸೋತ ಗುಜರಾತ್ ತಂಡ ಮುಖಾಮುಖಿಯಾಗಲಿದೆ. ಮೇ 28ರಂದು ಇದೇ ಮೈದಾನದಲ್ಲಿ ಫೈನಲ್ ಪಂದ್ಯ ನಡೆಯಲಿದ್ದು, ಕ್ವಾಲಿಫೈಯರ್ 1 ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಕ್ವಾಲಿಫೈಯರ್ 2 ವಿಜೇತ ತಂಡ ಎದುರಿಸಲಿದೆ.

RELATED ARTICLES

Related Articles

TRENDING ARTICLES