Thursday, December 19, 2024

ಬಿಗ್​ ಶಾಕ್​ ; ಟೇಕಾಫ್ ಗೆ ಸಿದ್ಧವಾಗಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ

ಮಂಗಳೂರು:  ಟೇಕಾಫ್​ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿ ಹೊಡೆದ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಹೌದು, ಪೈಲೆಟ್ ನ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ. ಇಂದು ಬೆಳಗ್ಗೆ 8.30ಕ್ಕೆ ಪ್ರಯಾಣಿಕರ ಸಹಿತ ಮಂಗಳೂರಿನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ. ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಸಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಇಂಡಿಗೋ ವಿಮಾನ ಸಾಗುತ್ತಿತ್ತು. ಈ ವೇಳೆ ಏಕಾಏಕಿಯಾಗಿ ವಿಮಾನದ ರೆಕ್ಕೆಯ ಭಾಗಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ. ತಕ್ಷಣ ಅಪಾಯದ ಸೂಚನೆ ಅರಿತು ಪೈಲಟ್ ಎಟಿಸಿಗೆ ಮಾಹಿತಿ ನೀಡಿದ್ದಾರೆ. ಟೇಕಾಫ್ ಕ್ಯಾನ್ಸಲ್ ಮಾಡಿ ರನ್ ವೇನಿಂದ ವಿಮಾನವನ್ನು ವಾಪಾಸ್ ತರಲಾಗಿದೆ.

ಸದ್ಯ ಪ್ರಯಾಣಿಕರನ್ನ ಇಳಿಸಿ ವಿಮಾನದ ತಪಾಸಣೆ ಮಾಡಲಾಗುತ್ತಿದೆ. ಬೆಂಗಳೂರಿನಿಂದ ಆಗಮಿಸಿದ ಮತ್ತೊಂದು ವಿಮಾನದ ಮೂಲಕ ಪ್ರಯಾಣಿಕರನ್ನು ದುಬೈಗೆ ಕಳಿಸಲು ವ್ಯವಸ್ಥೆ ಮಾಡಲಾಗಿದೆ. ಕೆಲ ಕಾಲ ಮಂಗಳೂರು ಏರ್ಪೋರ್ಟ್ ನಲ್ಲಿ ಈ ಅವಘಡ ಆತಂಕಕ್ಕೆ ಕಾರಣವಾಗಿತ್ತು.

 

RELATED ARTICLES

Related Articles

TRENDING ARTICLES