Tuesday, November 5, 2024

ಸಿಬಿಐ ನೂತನ ನಿರ್ದೇಶಕರಾಗಿ ಪ್ರವೀಣ್ ಸೂದ್ ಅಧಿಕಾರ ಸ್ವೀಕಾರ

ಬೆಂಗಳೂರು : ಕರ್ನಾಟಕದ ಮಾಜಿ ಡಿಜಿಪಿ (ಪೊಲೀಸ್ ಮಹಾನಿರ್ದೇಶಕ) ಪ್ರವೀಣ್ ಸೂದ್ (Praveen Sood) ಅವರು ಸಿಬಿಐ ನೂತನ ನಿರ್ದೇಶಕರಾಗಿ (Director of the Central Bureau of Investigation) ಅಧಿಕಾರ ಸ್ವೀಕರಿಸಿದ್ದಾರೆ.

ಸಿಬಿಐ ಕೇಂದ್ರ ಕಚೇರಿಯಲ್ಲಿ ನಿರ್ಗಮಿತ ನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್ (Subodh Kumar Jaiswal) ಅವರು ಪ್ರವೀಣ್ ಸೂದ್ ಅವರಿಗೆ ಕೇಂದ್ರೀಯ ತನಿಖಾ ಸಂಸ್ಥೆಯ ಉಸ್ತುವಾರಿಯನ್ನು ಹಸ್ತಾಂತರಿಸಿದ್ದಾರೆ.

ಸುಬೋಧ್ ಕುಮಾರ್ ಜೈಸ್ವಾಲ್ ಅವರಿಂದ ಅಧಿಕಾರ ವಹಿಸಿಕೊಂಡ ಹಿರಿಯ ಐಪಿಎಸ್ ಅಧಿಕಾರಿಯಾಗಿರುವ ಪ್ರವೀಣ್ ಸೂದ್ ಅವರು ಮುಂದಿನ 2 ವರ್ಷಗಳ ಕಾಲ ಸಿಬಿಐ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.

ಇದನ್ನೂ ಓದಿ : ಬೆಂಗಳೂರು ಪೊಲೀಸರಿಗೆ ಡಿಜಿಪಿ ಅಲೋಕ್ ಮೋಹನ್ ಹೊಸ ಟಾಸ್ಕ್

ಕರ್ನಾಟಕದ ಡಿಜಿಪಿಯಾಗಿ ಸೇವೆ

ಪ್ರವೀಣ್ ಸೂದ್ ಕರ್ನಾಟಕ ಕೇಡರ್ ನ 1986ನೇ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದ್ದು, ರಾಜ್ಯದ ಡಿಜಿಪಿ (ಪೊಲೀಸ್ ಮಹಾನಿರ್ದೇಶಕ)ಯಾಗಿ ಸೇವೆ ಸಲ್ಲಿಸಿದ್ದಾರೆ. ಸುಬೋಧ್ ಕುಮಾರ್ ಜೈಸ್ವಾಲ್ ನಂತರ ದೇಶದ ಅತ್ಯಂತ ಹಿರಿಯ ಐಪಿಎಸ್ ಅಧಿಕಾರಿಯಾಗಿದ್ದಾರೆ.

ಕಾಂಗ್ರೆಸ್ ನಾಯಕ ಚೌಧರಿ ಬೇಸರ

ಪ್ರಧಾನಿ ನರೇಂದ್ರ ಮೋದಿ, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನೊಳಗೊಂಡ ಉನ್ನತಾಧಿಕಾರ ಸಮಿತಿ ಸಭೆಯಲ್ಲಿ  ಪ್ರವೀಣ್ ಸೂದ್ ಅವರ ಹೆಸರನ್ನು ಅಂತಿಮಗೊಳಿಸಲಾಗಿತ್ತು. ಕಾಂಗ್ರೆಸ್ ನಾಯಕ ಚೌಧರಿ ಅವರು ಪ್ರವೀಣ್ ಸೂದ್ ಅವರನ್ನು ಸಿಬಿಐ ನಿರ್ದೇಶಕರಾಗಿ ಆಯ್ಕೆ ಮಾಡಿರುವ ಕುರಿತು ಬೇಸರ ಹೊರಹಾಕಿದ್ದಾರೆ ಎನ್ನಲಾಗಿದೆ.

RELATED ARTICLES

Related Articles

TRENDING ARTICLES