Saturday, August 23, 2025
Google search engine
HomeUncategorizedಕಾಂಗ್ರೆಸ್ ಇವತ್ತು 'ದ್ರೌಪದಿ ಮುರ್ಮು ಬಗ್ಗೆ ಮೊಸಳೆ ಕಣ್ಣೀರು' ಸುರಿಸುತ್ತಿದೆ : ಹೆಚ್.ಡಿ.ಕುಮಾರಸ್ವಾಮಿ

ಕಾಂಗ್ರೆಸ್ ಇವತ್ತು ‘ದ್ರೌಪದಿ ಮುರ್ಮು ಬಗ್ಗೆ ಮೊಸಳೆ ಕಣ್ಣೀರು’ ಸುರಿಸುತ್ತಿದೆ : ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ಕಾಂಗ್ರೆಸ್ ಇವತ್ತು ಆದಿವಾಸಿ ಮಹಿಳೆ ಎಂಬ ಕಾರಣಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಛೇಡಿಸಿದ್ದಾರೆ.

ಬೆಂಗಳೂರಿನಲ್ಲಿ ಸಂಸತ್ ಭವನ ಉದ್ಘಾಟನೆ ವಿಚಾರ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸಂಸತ್ ಭವನ ಉದ್ಘಾಟನೆ ವಿಚಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ. ತನ್ನ ಅನುಕೂಲಕ್ಕೆ ತಕ್ಕಂತೆ ಮಾತನಾಡುತ್ತಿದೆ ಎಂದು ಟೀಕಿಸಿದ್ದಾರೆ.

ಆದಿವಾಸಿ ಮಹಿಳೆ ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ ಆಗಿದ್ದಾಗ ಕಾಂಗ್ರೆಸ್ ಯಶವಂತ ಸಿನ್ಹಾ ಅವರನ್ನು ಅಭ್ಯರ್ಥಿ ಮಾಡಿದ್ದು ಯಾಕೆ? ಕಾಂಗ್ರೆಸ್ ಇವತ್ತು ಆದಿವಾಸಿ ಮಹಿಳೆ ಎಂಬ ಕಾರಣಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದೆ ಎಂದು ಕುಟುಕಿದ್ದಾರೆ.

ಜೆಡಿಎಸ್ ಮೃದುಧೋರಣೆ ಅಂತಾರೆ

ಮಾಜಿ ಪ್ರಧಾನಿ ದೇವೇಗೌಡರಿಗೆ ಆಹ್ವಾನ ಕಳಿಸಿದ್ದಾರೆ. ಹಾಗಾಗಿ, ದೇವೇಗೌಡರು ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮಕ್ಕೆ ಹೋಗುತ್ತ್ತಿದ್ದಾರೆ. ಇದರಿಂದ ಬಿಜೆಪಿ ಬಗ್ಗೆ ಜೆಡಿಎಸ್ ಮೃದುಧೋರಣೆ ಅಂತಾ ತಿಳಿಯುವ ಅಗತ್ಯ ಇಲ್ಲ ಎಂದು ಕಾಂಗ್ರೆಸ್ ಆರೋಪಗಳಿಗೆ ತಿರುಗೇಟು ಕೊಟ್ಟಿದ್ದಾರೆ.

ಇದನ್ನೂ ಓದಿ : JDS ವಿಸರ್ಜನೆ ಯಾವಾಗ? BJP ಸೋಲಿನ ಹೊಣೆ ಯಾರದ್ದು? : ಕಾಂಗ್ರೆಸ್ ಲೇವಡಿ

ವಿಕಾಸಸೌಧ ಉದ್ಘಾಟನೆಗೆ ಅವರನ್ನು ಕರೆದಿದ್ದಾರಾ?

ಕಾಂಗ್ರೆಸ್ ನಾಯಕರು ಕರ್ನಾಟಕದಲ್ಲಿ ವಿಕಾಸಸೌಧ ಉದ್ಘಾಟನೆ ಮಾಡಲು ರಾಷ್ಟ್ರಪತಿಗಳನ್ನು ಕರೆದಿದ್ದಾರಾ? ಅಂದು ಮುಖ್ಯಮಂತ್ರಿ, ಲೋಕೋಪಯೋಗಿ ಸಚಿವರೇ ವಿಕಾಸಸೌಧವನ್ನು ಉದ್ಘಾಟನೆ ಮಾಡಲಿಲ್ಲವೇ? ಈಗ ನೋಡಿದರೆ ಆದಿವಾಸಿ ಮಹಿಳೆಯನ್ನು ಕಡೆಗಣಿಸಿದ್ದಾರೆ ಅಂತಾ ನಾಟಕ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಸೋನಿಯಾರಿಂದ ಅಡಿಗಲ್ಲು ಹಾಕಿಸಿದ್ದು ನೆನಪಿಲ್ವಾ?

ಸಂಸತ್ ಭವನ ಉದ್ಘಾಟನೆಗೆ 21 ಪಕ್ಷಗಳು ಬಹಿಷ್ಕಾರ ಹಾಕಿವೆ. ಅದು ಆಯಾ ಪಕ್ಷದ ನಿಲವು. ಸಂಸತ್ ಭವನ ಯಾವುದೋ ಪಕ್ಷದ ಸಂಘಟನೆಗೆ ಸೀಮಿತವಾದ ಭವನ ಅಲ್ಲ. ದೇಶದ ಜನರ ತೆರಿಗೆ ಹಣದಿಂದ ಕಟ್ಟಿರುವ ಭವನ ಅದು. ರಾಷ್ಟ್ರಪತಿಗಳಿಂದ ಉದ್ಘಾಟನೆ ಆಗಬೇಕಿತ್ತು ಅನ್ನುವ ವಿಚಾರ ತೆಗೆದು ಕಾಂಗ್ರೆಸ್ ಬಹಿಷ್ಕಾರ ಮಾಡಲು ಮುಂದಾಗಿದೆ. ಇದೇ ಕಾಂಗ್ರೆಸ್ ಪಕ್ಷ ಛತ್ತೀಸಗಢದಲ್ಲಿ ವಿಧಾನಸಭಾ ಕಟ್ಟಡದ ಉದ್ಘಾಟನೆ ಮಾಡಲು ಸೋನಿಯಾ ಗಾಂಧಿ ಅವರಿಂದ ಅಡಿಗಲ್ಲು ಹಾಕಿಸಿತ್ತು. ಅಲ್ಲಿ ರಾಷ್ಟ್ರಪತಿ ಅವರು ನೆನಪಿಗೆ ಬರಲಿಲ್ಲವೇ? ಎಂದು ಪ್ರಶ್ನೆ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments