ಬೆಂಗಳೂರು : ಇಂದಿನ ಕ್ವಾಲಿಫೈಯರ್-2 ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿದ್ದು, ಟಾಸ್ ಗೆದ್ದ ಮುಂಬೈ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಅಹ್ಮದಾಬಾದ್ ನ ನರೇಂದ್ರ ಮೋದಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಹೈವೋಲ್ಟೇಜ್ ಕದನ ನಡೆಯಲಿದ್ದು, ಇಂದಿನ ಪಂದ್ಯದಲ್ಲಿ ಗೆದ್ದ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಫೈನಲ್ ಪಂದ್ಯದಲ್ಲಿ ಟ್ರೋಫಿಗಾಗಿ ಸೆಣೆಸಾಡಲಿದೆ.
ಮಳೆಯಿಂದಾಗಿ ಟಾಸ್ ಪ್ರಕ್ರಿಯೆ ವಿಳಂಬವಾಗಿತ್ತು. 7 ಗಂಟೆಗೆ ಟಾಸ್ ನಡೆಯಬೇಕಿತ್ತು. ಆದರೆ, ಮಳೆಯಿಂದಾಗಿ ಟಾಸ್ ಪ್ರಕ್ರಿಯೆಯನ್ನು 7.45ಕ್ಕೆ ನಿಗದಿಪಡಿಸಲಾಗಿತ್ತು. ಪಂದ್ಯ 8 ಗಂಟೆಗೆ ಆರಂಭವಾಗಲಿದೆ.
ಗುಜರಾತ್ ಸ್ಟ್ರೆಂಥ್
ಗುಜರಾತ್ ಈ ಆವೃತ್ತಿಯಲ್ಲಿ ಅಮೋಘ ಪ್ರದರ್ಶನ ನೀಡಿ ಪ್ಲೇ ಆಫ್ ಗೆ ಮೊದಲ ತಂಡವಾಗಿ ಎಂಟ್ರಿ ಕೊಟ್ಟಿತ್ತು. ಮೊದಲ ಕ್ವಾಲಿಫೈಯರ್ನಲ್ಲಿ ಚೆನ್ನೈ ವಿರುದ್ಧ ಸೋತಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲೂ ಪಾಂಡ್ಯ ಪಂಡೆ ಬೊಂಬಾಟ್ ಆಗಿದೆ. ವೃದ್ದಿಮಾನ್ ಸಾಹ, ಯಂಗ್ ಗನ್ ಶುಭ್ಮನ್ ಗಿಲ್ ಅದ್ಭುತ ಫಾರ್ಮ್ನಲ್ಲಿದ್ದಾರೆ. ದಸನ್ ಶನಕಾ, ಡೇವಿಡ್ ಮಿಲ್ಲರ್, ವಿಜಯ್ ಶಂಕರ್ ಹಾಗೂ ರಾಹುಲ್ ತೇವಾಟಿ ಕೊನೆಯ ಓವರ್ ಗಳಲ್ಲಿ ಆರ್ಭಟಿಸುತ್ತಿದ್ದಾರೆ. ರಶೀದ್ ಖಾನ್, ಮೊಹಮ್ಮದ್ ಶಮಿ, ಮೋಹಿತ್ ಶರ್ಮಾ ಗುಜರಾತ್ ತಂಡದ ಬೌಲಿಂಗ್ ಅಸ್ತ್ರವಾಗಿದ್ದಾರೆ.
🚨 Toss Update 🚨@mipaltan win the toss and elect to field first against @gujarat_titans in Ahmedabad.
Follow the match ▶️ https://t.co/f0Ge2x8XbA#TATAIPL | #Qualifier2 | #GTvMI pic.twitter.com/BdK4DQl7Qr
— IndianPremierLeague (@IPL) May 26, 2023
ಮುಂಬೈ ಸ್ಟ್ರೆಂಥ್
ಈ ಆವೃತ್ತಿಯಲ್ಲಿ ಮುಂಬೈ ಸಾಕಷ್ಟು ಏಳುಬೀಳು ಕಂಡಿದೆ. ಆದರೂ, ಕೊನೆಯ ಹಂತದಲ್ಲಿ ಭರ್ಜರಿ ಕಮ್ ಬ್ಯಾಕ್ ಮಾಡಿದೆ. ನಾಯಕ ರೋಹಿತ್ ಶರ್ಮಾ ಬಿಟ್ಟು ಉಳಿದ ಬ್ಯಾಟರ್ ಗಳು ಅಬ್ಬರಿಸುತ್ತಿದ್ದಾರೆ. ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಗ್ರೀನ್, ತಿಲಕ್ ವರ್ಮಾ, ಟಿಮ್ ಡೇವಿಡ್ ಬೊಂಬಾಟ್ ಫಾರ್ಮ್ನಲ್ಲಿದ್ದಾರೆ. ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆಂಡಾರ್ಫ್, ಕ್ರಿಸ್ ಜೋರ್ಡನ್, ಆಕಾಶ್ ಮಧ್ವಾಲ್ ತೂಫಾನ್ ಬೌಲಿಂಗ್ ಮಾಡುತ್ತಿದ್ದಾರೆ.
ಇದನ್ನೂ ಓದಿ : ಮಧ್ವಾಲ್ ಮ್ಯಾಜಿಕ್ ಗೆ ‘ಕನ್ನಡಿಗ ಕುಂಬ್ಳೆ’ ದಾಖಲೆ ಉಡೀಸ್..!
ಗುಜರಾತ್ ಟೈಟಾನ್ಸ್ ತಂಡ
ಹಾರ್ದಿಕ್ ಪಾಂಡ್ಯ (ನಾಯಕ), ವೃದ್ಧಿಮಾನ್ ಸಹಾ(ವಿ.ಕೀ), ಶುಭ್ಮನ್ ಗಿಲ್, ಸಾಯಿ ಸುದರ್ಶನ್, ಡೇವಿಡ್ ಮಿಲ್ಲರ್, ರಾಹುಲ್ ತೇವಾಟಿಯಾ, ರಶೀದ್ ಖಾನ್, ನೂರ್ ಅಹ್ಮದ್, ಮೊಹಮ್ಮದ್ ಶಮಿ, ಮೋಹಿತ್ ಶರ್ಮಾ, ವಿಜಯ್ ಶಂಕರ್
A look at the Playing XIs of the two sides!
Follow the match ▶️ https://t.co/f0Ge2x8XbA#TATAIPL | #Qualifier2 | #GTvMI pic.twitter.com/GY5a7fgAMa
— IndianPremierLeague (@IPL) May 26, 2023
ಮುಂಬೈ ಇಂಡಿಯನ್ಸ್ ತಂಡ
ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್(ವಿ.ಕೀ.), ಕ್ಯಾಮರೋನ್ ಗ್ರೀನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಟಿಮ್ ಡೇವಿಡ್, ಕ್ರಿಸ್ ಜೋರ್ಡಾನ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆಂಡಾರ್ಫ್, ಆಕಾಶ್ ಮಧ್ವಾಲ್, ಕುಮಾರ್ ಕಾರ್ತಿಕೇಯ