Sunday, December 22, 2024

ಸಿದ್ದರಾಮಯ್ಯ, ಪ್ರಿಯಾಂಕ್ ಖರ್ಗೆಗೆ ತಾಕತ್ ಇದ್ರೆ..! : ಕಟೀಲ್ ಬಹಿರಂಗ ಸವಾಲ್

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ್ ಖರ್ಗೆಗೆ ತಾಕತ್ ಇದ್ರೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದವರನ್ನು ಅರೆಸ್ಟ್ ಮಾಡಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸವಾಲ್ ಹಾಕಿದ್ದಾರೆ.

ಆರ್.ಎಸ್.ಎಸ್ ನಿಷೇಧ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ನೀಡಿರುವ ಹೇಳಿಕೆ ವಿಚಾರ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ನಳಿನ್ ಕುಮಾರ್ ಕಟೀಲ್, ಬಜರಂಗದಳ, ಆರ್.ಎಸ್.ಎಸ್ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಇರಲ್ಲ, ಸಿದ್ದರಾಮಯ್ಯ ಅವರ ರಾಜಕೀಯ ಮುಗಿಯುತ್ತೆ ಎಂದು ಗುಡುಗಿದ್ದಾರೆ.

ಆರ್.ಎಸ್.ಎಸ್ ಈ ದೇಶದಲ್ಲಿ ರಾಷ್ಟ್ರ ಭಕ್ತಿ ಕಲಿಸಿದೆ. ಈ ದೇಶ ನಡೆಸುವ ಪ್ರಧಾನ ಮಂತ್ರಿ ಆರ್.ಎಸ್.ಎಸ್ ಸ್ವಯಂ ಸೇವಕ. ಕೇಂದ್ರದ ಮಂತ್ರಿಗಳು, ನಾವೆಲ್ಲರೂ ಆರ್.ಎಸ್.ಎಸ್ ಸ್ವಯಂ ಸೇವಕರು. ನೆಹರೂ, ಇಂದಿರಾ ಗಾಂಧಿ ಎಲ್ಲರೂ ನಿಷೇಧಕ್ಕೆ ಕೈ ಹಾಕಿ ಕೈ ಸುಟ್ಟುಕೊಂಡಿದಾರೆ. ನರಸಿಂಹ ರಾವ್ ಸರ್ಕಾರ, ಯಾವಾಗೆಲ್ಲಾ ಕಾಂಗ್ರೆಸ್ ಸರ್ಕಾರ ಇತ್ತೋ ಆಗೆಲ್ಲಾ ಇದಾಗಿದೆ. ನಿಷೇಧದ ಕೆಲಸ ಮಾಡಿದಾಗಲೆಲ್ಲಾ ದೇಶದಲ್ಲಿ ಕಾಂಗ್ರೆಸ್ ಸರ್ಕಾರವೇ ಬಂದಿಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ : ಕಾಂಗ್ರೆಸ್ ಇವತ್ತು ‘ದ್ರೌಪದಿ ಮುರ್ಮು ಬಗ್ಗೆ ಮೊಸಳೆ ಕಣ್ಣೀರು’ ಸುರಿಸುತ್ತಿದೆ : ಹೆಚ್.ಡಿ ಕುಮಾರಸ್ವಾಮಿ

ಖರ್ಗೆ ನಾಲಿಗೆ ಹಿಡಿತದಲ್ಲಿ ಮಾತನಾಡಲಿ

ಸಿದ್ದರಾಮಯ್ಯ ಮತ್ತು ಪ್ರಿಯಾಂಕ್ ಖರ್ಗೆಗೆ ತಾಕತ್ ಇದ್ರೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರನ್ನು ಬಂಧಿಸಿ. ನಿಮ್ಮ ಮೆರವಣಿಗೆ, ವಿಜಯೋತ್ಸವ, ಸಭೆಗಳಲ್ಲೇ ಪಾಕಿಸ್ತಾನ ಪರ ಘೋಷಣೆ ಬಂದಿದೆ. ಅದು ಬಿಟ್ಟು ರಾಜ್ಯವನ್ನು ವಿಭಜನಾ ವಾದದ ಮೂಲಕ ಕಟ್ಟೋದು ಬೇಡ. ಪ್ರಿಯಾಂಕ್ ಖರ್ಗೆ ಬಾಯಿಗೆ ಹಿಡಿತ ಇಟ್ಟುಕೊಂಡು, ನಾಲಿಗೆ ಹಿಡಿತದಲ್ಲಿ ಮಾತನಾಡಲಿ ಎಂದು ವಾಗ್ದಾಳಿ ನಡೆಸಿದ್ದಾರೆ.

ನಿಷೇಧ ಮಾಡಲು ನಿಮಗೆ ಹಕ್ಕಿಲ್ಲ

ಬಜರಂಗದಳ, ಆರ್.ಎಸ್.ಎಸ್ ನಿಷೇಧ ಮಾಡಲು ನಿಮಗೆ ಹಕ್ಕಿಲ್ಲ. ಪಿಎಫ್ಐ ಅನ್ನ ನಾವು ನಿಷೇಧ ಮಾಡಿದ್ದೇವೆ, ಇವರೇನು ನಿಷೇಧ ಮಾಡೋದು? ಆರ್.ಎಸ್. ಎಸ್ ರಾಷ್ಟ್ರಭಕ್ತಿ ಸಂಕೇತ ಅಂತ ಕಾಂಗ್ರೆಸ್ ನಲ್ಲೇ ಹೇಳಿದ್ದಾರೆ. ವಿಧಾನಸೌಧದಲ್ಲಿ ಡಿಕೆಶಿಯವರೇ ಪ್ರಾರ್ಥನೆ ಹೇಳಿದ್ದಾರೆ, ಅದರಲ್ಲೇ ಇದೆ. ಆ ಪ್ರಾರ್ಥನೆಯಲ್ಲಿ ಏನಿದೆ ಅಂತ ಖರ್ಗೆಯವರು ಡಿಕೆಶಿ ಬಳಿ ಕೇಳಲಿ ಎಂದು ಪ್ರಿಯಾಂಕ್ ಖರ್ಗೆಗೆ ಟಕ್ಕರ್ ಕೊಟ್ಟಿದ್ದಾರೆ.

ರಾಜ್ಯವನ್ನು ದ್ವೇಷ, ವಿಭಜನೆ ಮೂಲಕ ಕಾಂಗ್ರೆಸ್ ಆಡಳಿತ ಮಾಡ್ತಿದೆ. ಇವರ ಮಂತ್ರಿ ಮಂಡಲದ ಗಲಾಟೆಯಲ್ಲೇ ಕಾಂಗ್ರೆಸ್ ವಿಭಜನೆ ಆಗುತ್ತೆ. ಇದರ ಭಯದಲ್ಲಿ ಆರ್.ಎಸ್‌ಎಸ್ ಹೆಸರಲ್ಲಿ ಕಾಂಗ್ರೆಸ್ ಗಟ್ಟಿ ಮಾಡ್ತಾ ಇದಾರೆ. ಇವರ ಜಗಳ ಹೊರ ಬಾರದಂತೆ ಮಾಡಲು ಇದು ಷಡ್ಯಂತ್ರ ಎಂದು ನಳಿನ್ ಕುಮಾರ್ ಕಟೀಲ್ ಛೇಡಿಸಿದ್ದಾರೆ.

RELATED ARTICLES

Related Articles

TRENDING ARTICLES